ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KGF Chapter 2 - Trailer: ಕೆಜಿಎಫ್ ಟ್ರೈಲರ್ ಬಿಡುಗಡೆ ಸಮಾರಂಭದ ಲೈವ್ ನೋಡಿ

Last Updated 27 ಮಾರ್ಚ್ 2022, 12:46 IST
ಅಕ್ಷರ ಗಾತ್ರ

ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್ ಮುಖ್ಯ ಪಾತ್ರದಲ್ಲಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್ ಚಾಫ್ಟರ್ 2’ ಟ್ರೈಲರ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕೆಜಿಎಫ್ 2ಟ್ರೈಲರ್ ಬಿಡುಗಡೆಗೆ ಸಿದ್ಧತೆ ನಡೆದಿದೆ. ನಟ ಯಶ್, ನಟ ಸಂಜಯ್ ದತ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಟ್ರೈಲರ್‌ ಇಂದು (ಭಾನುವಾರ) ಸಂಜೆ 6.40ಕ್ಕೆ ಬಿಡುಗಡೆಯಾಗಲಿದೆ.ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈಗಾಗಲೇ ’ತೂಫಾನ್‌’ ಲಿರಿಕಲ್ ಹಾಡು ಬಿಡುಗಡೆಯಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಚಿತ್ರ ಏಪ್ರಿಲ್ 14 ಕ್ಕೆ ಬಿಡುಗಡೆಯಾಗಲಿದ್ದು ಇದಕ್ಕಾಗಿ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ.

ಕೆಜಿಎಫ್ 2 ಟ್ರೈಲರ್ ಬಿಡುಗಡೆಯ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT