ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KGF Chapter 2: ಕೆಜಿಎಫ್ ಚಾಫ್ಟರ್ 2 ಟ್ರೈಲರ್ ಬಿಡುಗಡೆ ದಿನಾಂಕ ಘೋಷಣೆ

Last Updated 21 ಮಾರ್ಚ್ 2022, 8:50 IST
ಅಕ್ಷರ ಗಾತ್ರ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಖ್ಯ ಪಾತ್ರದಲ್ಲಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್ ಚಾಫ್ಟರ್ 2’ ಟ್ರೈಲರ್ ಇದೇ ಮಾರ್ಚ್ 27 ರಂದು ಬಿಡುಗಡೆಯಾಗಲಿದೆ.

ಇನ್ನು, ಇಂದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ’ತೂಫಾನ್‌’ ಲಿರಿಕಲ್ ಹಾಡು ಸೋಮವಾರ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಿಯಾಳಂನಲ್ಲಿ ಜಿದ್ದಿ ಜಿದ್ದಿ ಹೈ ತೂಫಾನ್ ಹಾಡು ಬಿಡುಗಡೆಯಾಗಿದ್ದು, ಟ್ರೆಂಡಿಂಗ್ ನಂಬರ್ 1 ಆಗಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್ ಹಾಗೂ ಯಶ್ ಮೇನಿಯಾ ಪ್ರಾರಂಭವಾಗಿದೆ.

ಲಿರಿಕಲ್ ಸಾಂಗ್‌ನಲ್ಲಿ ರವಿ ಬಸ್ರೂರ್ ಸಂಗೀತ ನೀಡಿ ರಚಿಸಿರುವ ಈ ಹಾಡಿನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಇದೇ ವೇಳೆ ಕೆಜಿಎಫ್ ಚಾಫ್ಟರ್ 2 ಸಿನಿಮಾದ ಟ್ರೈಲರ್ ಮಾರ್ಚ್ 27 ರಂದು ಬೆಳಿಗ್ಗೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಚಿತ್ರ ಏಪ್ರಿಲ್ 14 ಕ್ಕೆ ಬಿಡುಗಡೆಯಾಗಲಿದ್ದು ಇದಕ್ಕಾಗಿ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ.

ಚಿತ್ರದಲ್ಲಿ ಸಂಜಯ್‌ ದತ್‌, ರವೀನಾ ಟಂಡನ್‌ ಸೇರಿದಂತೆ ಹಲವು ಪ್ರಮುಖ ನಟರು ಇದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕಿರಗಂದೂರು ಚಿತ್ರ ನಿರ್ಮಿಸುತ್ತಿದ್ದಾರೆ. ಈ ವರ್ಷ ಜನವರಿ 7ರಂದು ಚಿತ್ರದ ಯುನಿವರ್ಸಲ್‌ ಟೀಸರ್‌ ಬಿಡುಗಡೆ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT