ಭಾನುವಾರ, ಏಪ್ರಿಲ್ 11, 2021
33 °C

ಜುಲೈ 16ರಂದು ಯಶ್‌ ಅಭಿನಯದ 'ಕೆಜಿಎಫ್ ಚಾಪ್ಟರ್–2' ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್‌ ಚಾಪ್ಟರ್‌–2 ಚಿತ್ರದ ಪೋಸ್ಟರ್– ಕೃಪೆ: ಹೊಂಬಾಳೆ ಫಿಲಂಸ್‌ ಟ್ವಿಟರ್‌ ಖಾತೆ

ಬೆಂಗಳೂರು: ಕೆಜಿಎಫ್ ಚಾಪ್ಟರ್- 2 ಈ ವರ್ಷ ಜುಲೈ 16ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದೆ.

ಬಹು ನಿರೀಕ್ಷಿತ ಕೆಜಿಎಫ್‌ ಚಾಪ್ಟರ್‌ –2 ಚಿತ್ರದ ಬಿಡುಗಡೆಯ ದಿನಾಂಕ ಶುಕ್ರವಾರ ಪ್ರಕಟವಾಗಿದೆ. ಹೊಂಬಾಳೆ ಫಿಲ್ಮ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಸಂಜೆ 6.32ಕ್ಕೆ ಮಾಹಿತಿ ಪ್ರಕಟಿಸಿದೆ.

ಮಕರ ಸಂಕ್ರಾಂತಿ ವೇಳೆಗೆ ಈ ಚಿತ್ರ ಬಿಡುಗಡೆ ಆಗುವ ಸುದ್ದಿ ಇತ್ತು. ಜನವರಿ 7ರಂದು ಯೂನಿವರ್ಸಲ್ ಟೀಸರ್ ಬಿಡುಗಡೆ ಆಗಿತ್ತು. ಚಿತ್ರವು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ರಾಕಿಂಗ್ ಸ್ಟಾರ್ ಯಶ್, ಬಾಲಿವುಡ್ ನಟರಾದ ಸಂಜಯ್ ದತ್, ರವೀನಾ ಟಂಡನ್, ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

ಕೋವಿಡ್‌ನಿಂದಾಗಿ ಚಿತ್ರಮಂದಿರಗಳಲ್ಲಿ ಪೂರ್ಣ ಆಸನ ಭರ್ತಿಗೆ ಅವಕಾಶ ಇಲ್ಲದಿರುವುದು, ಕನ್ನಡ ಚಿತ್ರದ ತೆಲುಗು ಅವತರಣಿಕೆ ಬಿಡುಗಡೆಗೆ ಟಾಲಿವುಡ್‌ನಲ್ಲಿ ಅಡ್ಡಿ ಎದುರಾಗಿರುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ತಡವಾಗಿ  ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಚಿತ್ರ ತಂಡದ ಮೂಲಗಳು ಹೇಳಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು