ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್ ಚಿತ್ರದ ಹಾಡು ಬಳಕೆ ವಿವಾದ: ಲಹರಿ ವೇಲು ವಿರುದ್ಧ ಕಿಡಿಕಾರಿದ ನಟಿ ರಮ್ಯಾ

Last Updated 9 ನವೆಂಬರ್ 2022, 7:49 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ್ ಜೋಡೊ ಯಾತ್ರೆ ವೇಳೆ ಕೆಜಿಎಫ್-2 ಚಿತ್ರದ ಸಂಗೀತವನ್ನು ಅನುಮತಿ ಇಲ್ಲದೆ ಬಳಕೆ ಮಾಡಿಕೊಂಡಿರುವುದಕ್ಕೆ ಎಂಆರ್‌ಟಿ ಸಂಗೀತ ಕಂಪನಿಯಿಂದ ನ್ಯಾಯಾಲಯಕ್ಕೆ ದಾವೆ ಹೂಡಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಅವರು ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ ಅವರು, ಲಹರಿ ವೇಲು ಬಿಜೆಪಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುವ ತಯಾರಿಯಲ್ಲಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

‘ತುಂಬಾ ಜನ ಜನಪ್ರಿಯ ಕೆಜಿಎಫ್ ಚಿತ್ರದ ಹಾಡುಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿದ್ದಾರೆ. ಅದಕ್ಕೆ ಆಕ್ಷೇಪ ಎತ್ತದ ಲಹರಿ ವೇಲು, ಕಾಂಗ್ರೆಸ್ ಬಳಸಿದರೇ ಮಾತ್ರ ಅವರಿಗೆ ಸಮಸ್ಯೆಯಾಗಿದೆ’ ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕೆಜಿಎಫ್-2 ಚಿತ್ರದ ಸಂಗೀತವನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವ ಆರೋಪದ ಮೇರೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಮತ್ತು ಭಾರತ್ ಜೋಡೊ ಯಾತ್ರೆಯ ಅಧಿಕೃತ ಟ್ವಿಟರ್ ಖಾತೆಗಳನ್ನು ಇದೇ 21ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲು ನಗರದ ವಾಣಿಜ್ಯ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿತ್ತು.

ಕೆಜಿಎಫ್-2 ಚಿತ್ರದ ಸಂಗೀತದ ಹಕ್ಕುಸ್ವಾಮ್ಯ ಹೊಂದಿರುವ ಎಂಆರ್‌ಟಿ ಮ್ಯೂಸಿಕ್ ಕಂಪನಿ ಸಲ್ಲಿಸಿರುವ ಅಸಲು ದಾವೆ ವಿಚಾರಣೆ ನಡೆಸಿದ ನಗರದ 86ನೇ ವಾಣಿಜ್ಯ ನ್ಯಾಯಾಲಯ ಈ ಕುರಿತಂತೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT