ಬೆಂಗಳೂರು: ಚಂದನವನದ ನಟಿ ರಾಧಿಕಾ ಪಂಡಿತ್ ಹಾಗೂ ನಟ ಯಶ್ ದಾಂಪತ್ಯ ಜೀವನಕ್ಕೆ ಐದು ವರ್ಷಗಳು ಸಂದಿವೆ.
ಈ ಜೋಡಿ 2016ರ ಡಿಸೆಂಬರ್ 9ರಂದು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ಕಿರುತೆರೆಯಲ್ಲಿ ಒಟ್ಟಾಗಿ ನಟಿಸಿ, ನಂತರ ಹಿರಿತೆರೆಗೆ ಬಂದ ಈ ಜೋಡಿ ಪರಸ್ಪರ ಪ್ರೀತಿಸಿ ಮದುವೆ ಆದರು. ಈ ವಿಶೇಷ ದಿನದ ಬಗ್ಗೆ ರಾಧಿಕಾ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಪ್ರಕಟಿಸಿದ್ದಾರೆ.
ಇಬ್ಬರು ಒಟ್ಟಿಗೆ ಇರುವ ಪೋಸ್ಟ್ ಪ್ರಕಟಿಸಿರುವ ರಾಧಿಕ, 5ನೇ ವರ್ಷದ ದಾಂಪತ್ಯಕ್ಕೆ ಶುಭ ಕೋರಿದ್ದಾರೆ. ಇದನ್ನು ನೋಡಿರುವ ಅಭಿಮಾನಿಗಳು ಖುಷಿಯಾಗಿದ್ದು ಹಾಗೇ ಯಶ್–ರಾಧಿಕಾಜೋಡಿಗೆ ಶುಭಾಶಯ ತಿಳಿಸುತ್ತಿದ್ದಾರೆ.
ಸದ್ಯ ರಾಧಿಕಾ ನಟನೆಯಿಂದ ದೂರ ಉಳಿದಿದ್ದಾರೆ. 2019ರಲ್ಲಿ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಇನ್ನು, ಯಶ್ ‘ಕೆಜಿಎಫ್ 2’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾ ಏಪ್ರಿಲ್ ತಿಂಗಳಲ್ಲಿ ತೆರೆಗೆ ಬರುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.