ಗುರುವಾರ , ಜನವರಿ 27, 2022
27 °C

ಕುಟುಂಬದೊಂದಿಗೆ ಜನ್ಮದಿನ ಆಚರಿಸಿಕೊಂಡ ರಾಕಿಂಗ್‌ ಸ್ಟಾರ್‌ ಯಶ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ರಾಕಿಂಗ್‌ ಸ್ಟಾರ್‌ ಯಶ್‌ ಅವರು 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ ಕೇವಲ ಕುಟುಂಬ ಸದಸ್ಯರೊಂದಿಗೆ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಫೋಟೊವೊಂದನ್ನು ಹಂಚಿಕೊಂಡಿರುವ ಅವರು, ‘ಜನ್ಮದಿನಗಳು ನನ್ನನ್ನು ಎಂದಿಗೂ ಉತ್ಸುಕನನ್ನಾಗಿ ಮಾಡಿಲ್ಲ. ಆದರೆ, ಅದರ ಸಂತೋಷವನ್ನು ನಾನು ಸುತ್ತಲೂ ನೋಡುತ್ತಿದ್ದೇನೆ. ಈಗ ವಿಶೇಷವಾಗಿ ನನ್ನ ಪುಟ್ಟ ಮಕ್ಕಳೊಂದಿಗೆ ಆಚರಿಸಿಕೊಳ್ಳುತ್ತಿದ್ದೇನೆ. ಅವರು ನನ್ನನ್ನು ಉತ್ಸುಕನನ್ನಾಗಿ ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.

‘ನಿಮ್ಮ ಪ್ರೀತಿ ಮತ್ತು ಆಶೀರ್ವಾದ ದೊಡ್ಡದು. ಪ್ರತಿಯೊಬ್ಬ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಧನ್ಯವಾದಗಳನ್ನು ಹೇಳಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ. ಎಲ್ಲರೂ ಸುರಕ್ಷಿತವಾಗಿ ಇದ್ದೀರಿ ಎಂಬುದಾಗಿ ಭಾವಿಸುತ್ತೇನೆ. ಕಾಳಜಿ ವಹಿಸಿ’ ಎಂದು ಯಶ್‌ ಹೇಳಿದ್ದಾರೆ.

ಯಶ್‌ ಹಂಚಿಕೊಂಡಿರುವ ಫೋಟೊದಲ್ಲಿ ಅವರ ಪತ್ನಿ ನಟಿ ರಾಧಿಕಾ ಪಂಡಿತ್‌, ಮಗ ಹಾಗೂ ಮಗಳು ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು