ಪ್ರಶಾಂತ್ ನೀಲ್ ನಿರ್ದೇಶನ: ಪ್ರಭಾಸ್ ಅಭಿನಯದ ‘ಸಲಾರ್’ನಲ್ಲಿ ಯಶ್ ಅತಿಥಿ ಪಾತ್ರ?

ಹೈದರಾಬಾದ್: ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಹಾಗೂ ಪ್ರಭಾಸ್ ಅಭಿನಯದ ಆ್ಯಕ್ಷನ್ ಥ್ರಿಲ್ಲರ್ ‘ಸಲಾರ್’ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮುಡಿಸಿದೆ.
‘ಸಲಾರ್’ ಚಿತ್ರದಲ್ಲಿ ಯಶ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಪ್ರಶಾಂತ್ ನೀಲ್ ಆಗಲಿ ಅಥವಾ ಯಶ್ ಆಗಲಿ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದರೆ, ಮಾತುಕತೆಯಂತೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಹೊಂಬಾಳೆ ಫಿಲಂಸ್ ಬ್ಯಾನರ್‌ನಡಿ ವಿಜಯ್ ಕಿರಗಂದೂರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂ ಸ್ಟಾರ್ ಪೃಥ್ವಿರಾಜ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಓದಿ...
‘ಲೈಗರ್’ ಹೊಸ ಪೋಸ್ಟರ್ ಬಿಡುಗಡೆ: ವಿಭಿನ್ನ ಅವತಾರದಲ್ಲಿ ವಿಜಯ್ ದೇವರಕೊಂಡ
Video | ಇಂಗ್ಲೆಂಡ್ ವಿರುದ್ಧ ಪಂತ್ ಶತಕ: ಡಗೌಟ್ನಲ್ಲಿ ರಾಹುಲ್ ದ್ರಾವಿಡ್ ಸಂಭ್ರಮ
ಮತ್ತೆ ಒಂದಾದ ಪ್ರಭಾಸ್ –ಅನುಷ್ಕಾ: ಬಾಹುಬಲಿ ಜೋಡಿಯಿಂದ ಸಿಕ್ತು ಸಿಹಿ ಸುದ್ದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.