ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳಿಂದಲೇ ಕೂಡಿರುವ ‘ಖೈದಿಪ್ರೇಮಿ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ವಂಶಿ ಎಡೆದೊರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಥ್ರಿಲ್ಲರ್ ಮಂಜು ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.

‘ಇದೊಂದು ಪ್ರೇಮಕಥೆಯಾದರೂ, ಮಾನವೀಯತೆಗೆ ಹೆಚ್ಚು ಪ್ರಾಮುಖ್ಯ ನೀಡಿ ಕಥೆ ಮಾಡಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ಈ ಕಥೆ ಸಿದ್ಧ ಮಾಡಿಟ್ಟುಕೊಂಡಿದ್ದು, ತುಂಬಾ ಹೋಮ್ ವರ್ಕ್ ಮಾಡಿದ್ದೇನೆ. ರಮೇಶ್ ಭಟ್, ಥ್ರಿಲ್ಲರ್ ಮಂಜು, ಅಭಿಜಿತ್ರಂಥ ಹಿರಿಯರ ಸಹಕಾರದಿಂದ ಚಿತ್ರ ಈ ಹಂತ ತಲುಪಿದೆ. ಮಂಡ್ಯ ಸುತ್ತಮುತ್ತ ಚಿತ್ರೀಕರಿಸುವ ಆಲೋಚನೆಯಿದೆ. ಫೆಬ್ರುವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು ನಿರ್ದೇಶಕ.

ಮರುಜನ್ಮ ಮೂವೀಸ್ ಬ್ಯಾನರ್ನಲ್ಲಿ ಎಂ.ತಿಲಕ್ ಬಂಡವಾಳ ಹೂಡುವುದರ ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅಭಿಜಿತ್ ಪ್ರಮುಖ ಪಾತ್ರದಲ್ಲಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಕುಶಾಲರಾಜ್ ಸಂಗೀತ, ಕೃಷ್ಣಂಬಲ ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.