ಮುಂಬೈ: ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದಾರೆ ಎಂದು ವದಂತಿ ಎದ್ದಿತ್ತು.

ಆದರೆ, ನಟಿಯ ಆಪ್ತ ಸಹಾಯಕರು ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.

ಕಿಯಾರಾ ಅವರು ಬಿಡುವಿಲ್ಲದ ಕೆಲಸಗಳ ಒತ್ತಡದಿಂದ ಬಳಲಿದ್ದಾರೆ. ವೈದ್ಯರು ಅವರಿಗೆ ವಿಶ್ರಾಂತಿಯ ಮೊರೆ ಹೋಗುವಂತೆ ಸೂಚಿಸಿದ್ದಾರೆ. ಹೀಗಾಗಿ ಅವರು ವಿಶ್ರಾಂತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಿಯಾರಾ ನಟಿಸಿರುವ ಹಾಗೂ ರಾಮ್ ಚರಣ್ ಪ್ರಮುಖ ಪಾತ್ರದಲ್ಲಿರುವ ಶಂಕರ್ ನಿರ್ದೇಶನದ ಚಿತ್ರ ಇದೇ ಜನವರಿ 10ಕ್ಕೆ ಬಿಡುಗಡೆಯಾಗಲಿದೆ.

ಈ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಿಯಾರಾ ಗೈರಾಗಿದ್ದರು. ಹೀಗಾಗಿ ನಟಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ವದಂತಿ ಎದ್ದಿತ್ತು.
.#SSMB: ಸದ್ದಿಲ್ಲದೇ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದರೇ ರಾಜಮೌಳಿ?.ಹಾಲಿವುಡ್ ನಟಿಗೆ ಮೈಸೂರ್ ಸ್ಯಾಂಡಲ್ ಸೋಪ್ ಗಿಫ್ಟ್ ಕೊಟ್ಟ ಶೆಫ್ ವಿಕಾಸ್ ಖನ್ನಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.