ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ಧಾರ್ಥ್ ಮಲ್ಹೋತ್ರಾ ಜತೆ ಬ್ರೇಕಪ್: ಮೌನ ಮುರಿದ ಕಿಯಾರಾ ಅಡ್ವಾಣಿ ಹೇಳಿದ್ದೇನು?

ಅಕ್ಷರ ಗಾತ್ರ

ಮುಂಬೈ: ‘ಶೇರ್‌ಷಾ’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಜೋಡಿ ಇದೀಗ ಮತ್ತೆ ಸುದ್ದಿಯಲಿದೆ.

ಹೌದು ಈ ಬಾರಿ ಸುದ್ದಿಯಲ್ಲಿರುವುದು ಹೊಸ ಸಿನಿಮಾ ವಿಚಾರದಿಂದಲ್ಲ. ಸಿದ್ಧಾರ್ಥ್ –ಕಿಯಾರಾ ಜೋಡಿ ‘ಬ್ರೇಕಪ್’ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಬಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿವೆ.

ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಕಿಯಾರಾ ಅಡ್ವಾಣಿ ಡೇಟಿಂಗ್‌ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರಿಬ್ಬರ ಮದುವೆ ಕುರಿತಾದ ವದಂತಿಗಳು ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಈ ವಿಚಾರಕ್ಕೆ ಸಂಬಂಧಿಸಿ ಅವರು ಸಾರ್ವಜನಿಕವಾಗಿ ಮಾತನಾಡಿರಲಿಲ್ಲ.

ಇತ್ತೀಚಿಗೆ ‘ನವಭಾರತ್ ಟೈಮ್ಸ್‌’ ಸಂದರ್ಶನದಲ್ಲಿ ಮಾತನಾಡಿರುವ ಕಿಯಾರಾ, ಬ್ರೇಕಪ್‌ ಬಗ್ಗೆ ಮೌನ ಮುರಿದಿದ್ದಾರೆ. ‘ನಾನು ಈ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ. ನಾನು ಏನು ಹೇಳಿಲ್ಲ ಎಂದರೂ ಸುದ್ದಿ ಬರೆಯುತ್ತಾರೆ. ನಾನು ಏನಾದರೂ ಹೇಳಿದರೆ ಅದರ ಬಗ್ಗೆ ಹೇಗೆ ಬರೆಯುತ್ತಾರೋ ನನಗೆ ಗೊತ್ತಿಲ್ಲ. ನಾನು ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನ ಎರಡರಲ್ಲೂ ಖುಷಿಯಾಗಿದ್ದೇನೆ. ಎಂದಿದ್ದಾರೆ.

ಕಾರ್ತಿಕ್‌ ಆರ್ಯನ್ ಅಭಿನಯದ ‘ಭೂಲ್ ಭೂಲೆಯ್ಯ 2’ ಸಿನಿಮಾ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೆತೆಗೆ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ಇದುವರೆಗೆ ₹230 ಕೋಟಿ ಗಳಿಸಿದೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT