ಮುಂಬೈ: ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಂಗಳವಾರ ಸಂಜೆ ಎಚ್.ಎನ್. ರಿಲಯನ್ಸ್ ಆಸ್ಪತ್ರೆಯಲ್ಲಿ ಕಿಯಾರಾ ಮತ್ತು ಸಿದ್ಧಾರ್ಥ್ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

2023ರ ಫೆಬ್ರುವರಿಯಲ್ಲಿ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಮದುವೆಯಾಗಿದ್ದರು. ಇದೇ ವರ್ಷದ ಫೆಬ್ರುವರಿಯಲ್ಲಿ ಕಿಯಾರಾ, ನಾನು ತಾಯಿಯಾಗುತ್ತಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದರು.

2021ರಲ್ಲಿ ತೆರೆಕಂಡಿದ್ದ ‘ಶೇರ್ಷಾ’ ಚಿತ್ರದಲ್ಲಿ ಕಿಯಾರಾ ಮತ್ತು ಒಟ್ಟಾಗಿ ನಟಿಸಿದ್ದರು. ಈಗ ಕಿಯಾರಾಗೆ ಹೆಣ್ಣು ಮಗು ಜನಿಸಿದೆ. ಅವರಿಗೆ ಇಡೀ ಬಾಲಿವುಡ್ ಚಿತ್ರರಂಗ ಹಾಗೂ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.
.ಅಮ್ಮನಾಗುತ್ತಿರುವ ಖುಷಿಯೊಂದಿಗೆ ಮೆಟ್ ಗಾಲಾದಲ್ಲಿ ಹೆಜ್ಜೆ ಹಾಕಿದ ನಟಿ ಕಿಯಾರಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.