ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ರಾಮರಸ’ಕ್ಕೆ ಸುದೀಪ್‌ ಸಾಥ್‌

Published 22 ಜೂನ್ 2024, 5:03 IST
Last Updated 22 ಜೂನ್ 2024, 5:03 IST
ಅಕ್ಷರ ಗಾತ್ರ

ಬಿಗ್‌ ಬಾಸ್ ರಿಯಾಲಿಟಿ ಶೋ ವಿಜೇತ ಕಾರ್ತಿಕ್ ಮಹೇಶ್ ನಾಯಕನಾಗಿರುವ ‘ರಾಮರಸ’ ಚಿತ್ರಕ್ಕೆ ಕಿಚ್ಚ ಸುದೀಪ್‌ ಸಾಥ್‌ ನೀಡಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗಷ್ಟೇ ನಾಯಕ ನಟನನ್ನು ಪರಿಚಯಿಸುವ ವಿಶೇಷ ವಿಡಿಯೊ ಬಿಡುಗಡೆ ಮಾಡಿ ಶುಭಹಾರೈಸಿದರು.

ಗುರು ದೇಶಪಾಂಡೆ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ‘ಜಟ್ಟ’ ಗಿರಿರಾಜ್‍ ನಿರ್ದೇಶನವಿದೆ. ‘ನಾನು ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಸಾಕಷ್ಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇನೆ. ಪ್ರತಿ ಸೀಸನ್‍ನಲ್ಲೂ ಒಬ್ಬ ಹೊಸ ಹೀರೊ ಹುಟ್ಟಿಕೊಳ್ಳುತ್ತಿದ್ದಾನೆ. ‘ಬಿಗ್‍ ಬಾಸ್‍’ ಗೆಲ್ಲುವುದು ಅಷ್ಟು ಸುಲಭವಲ್ಲ. ಕಾರ್ತಿಕ್‍ ಅವರಿಗಂತೂ ಬಹಳಷ್ಟು ಸ್ಪರ್ಧಿಗಳಿದ್ದರು. ‘ಬಿಗ್ ಬಾಸ್’ ಗೆದ್ದ ಮೇಲೆ ಕಾರ್ತಿಕ್ ಅವರಿಗೆ ಒಳ್ಳೆಯ ಅವಕಾಶಗಳು ಬರುತ್ತಿದೆ‌’ ಎಂದರು ಸುದೀಪ್‌.

‘ಗುರು ದೇಶಪಾಂಡೆಯಂತಹ ನಿರ್ಮಾಪಕರು ಎಲ್ಲ ನಿರ್ದೇಶಕರಿಗೂ ಸಿಗಬೇಕು. ನಾಯಕನ ಪರಿಚಯಿಸುವ ಕಾರ್ಯಕ್ರಮವನ್ನೇ ಅದ್ದೂರಿಯಾಗಿ ಮಾಡಿದ್ದಾರೆ. ಚಿತ್ರ ಖಂಡಿತ ಅದ್ದೂರಿಯಾಗಿರುತ್ತದೆ. ಚಿತ್ರದ ಕುರಿತು ಉಳಿದ ಮಾಹಿತಿಗಳನ್ನು ಹಂತಹಂತವಾಗಿ ನೀಡುತ್ತೇವೆ’ ಎಂದರು ನಿರ್ದೇಶಕ ಗಿರಿರಾಜ್‌. 

ಗುರು ದೇಶಪಾಂಡೆ ಅವರ ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ, ಎ.ವಿ. ಕೃಷ್ಣಕುಮಾರ್ ಛಾಯಾಚಿತ್ರಗ್ರಹಣ, ಅರ್ಜುನ್‍ ಕಿಟ್ಟು ಸಂಕಲನವಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT