ಮಂಗಳವಾರ, ಅಕ್ಟೋಬರ್ 19, 2021
24 °C

ಹುಟ್ಟುಹಬ್ಬಕ್ಕೂ ಮುನ್ನವೇ ಕಿಚ್ಚನಿಗೆ ಸ್ಪೆಷಲ್‌ ಸರ್ಪೈಸ್ ನೀಡಿದ ಅನಿಲ್‌ ಕುಂಬ್ಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತದ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬಕ್ಕೂ ಮುನ್ನವೇ ಸ್ಪೆಷಲ್‌ ಸರ್ಪೈಸ್‌ವೊಂದನ್ನು ನೀಡಿದ್ದಾರೆ.

ಹೌದು, ಸೆ.2ರಂದು ಸುದೀಪ್‌ ಅವರು 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಹಾಗಾಗಿ 10 ದಿನಗಳು ಬಾಕಿ ಇರುವಾಗಲೇ ಕುಂಬ್ಳೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಕಾಮನ್ ಡಿಪಿ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿದೆ.

‘ನನ್ನ ಪ್ರೀತಿಯ ಗೆಳೆಯ ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕಾಗಿ ಕಾಮನ್ ಡಿಪಿ ಪೋಸ್ಟರ್‌ ಬಿಡುಗಡೆ ಮಾಡಲು ಸಂತೋಷವಾಗುತ್ತಿದೆ. ನೀವೂ ಸದಾಕಾಲ ಸ್ಫೂರ್ತಿದಾಯಕವಾಗಿರಿ’ ಎಂದು ಕುಂಬ್ಳೆ ಟ್ವೀಟ್ ಮಾಡಿದ್ದಾರೆ.

ಸುದೀಪ್‌, ಹುಟ್ಟುಹಬ್ಬದ ದಿನ ಹೊಸ ಸಿನಿಮಾ ಕುರಿತು ಮಾಹಿತಿ ಹಂಚಿಕೊಳ್ಳುವ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ.

ಸುದೀಪ್‌ ನಟನೆಯ ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಚಿತ್ರ ‘ವಿಕ್ರಾಂತ್‌ ರೋಣ’ ತೆರೆಯ ಮೇಲೆ ಬರಲು ಸಜ್ಜಾಗಿದೆ. ಲಾಕ್‌ಡೌನ್‌ ಕಾರಣದಿಂದ ಸ್ತಬ್ಧವಾಗಿದ್ದ ಚಿತ್ರರಂಗದ ಚಟುವಟಿಕೆ ಕ್ರಮೇಣವಾಗಿ ಗರಿಗೆದರುತ್ತಿದ್ದು, ಇದೇ ಸಂದರ್ಭದಲ್ಲಿ ‘ವಿಕ್ರಾಂತ್‌ ರೋಣ’ಗೆ ಅಂತಿಮ ಸ್ಪರ್ಶ ನೀಡುವಲ್ಲಿ ಸುದೀಪ್‌ ಮಗ್ನರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು