ಕೆವಿಎನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆಯಾಗಿದೆ. ಸಿನಿಮಾವನ್ನು ವೀಕ್ಷಿಸಿದ ಬಳಿಕ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಪ್ರೇಮ್ ನಿರ್ದೇಶನದಲ್ಲಿ ಮೂಡಿಬಂದಿರುವ ಕೆಡಿ ಸಿನಿಮಾದಲ್ಲಿ ಉತ್ತಮ ಡೈಲಾಂಗ್ಗಳಿವೆ. ಈ ಮೂಲಕ ಪ್ರೇಮ್ ಅವರು ತಮ್ಮ ಹಳೆದ ಶೈಲಿಗೆ ಮರಳಿದ್ದಾರೆ ಎಂದು ಅಭಿಮಾನಿಗಳು ಹೊಗಳುತ್ತಿದ್ದಾರೆ.

ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿನಿಮಾದಲ್ಲಿ ಅವರ ಪಾತ್ರ ಪರಿಚಯವನ್ನು ಸಕತ್ ಮಾಸ್ ಆಗಿ ತೋರಿಸಲಾಗಿದೆ. ಸಂಭಾಷಣೆ, ನಟನೆ ಚೆನ್ನಾಗಿ ಮೂಡಿ ಬಂದಿದೆ.

ಸಿನಿಮಾದ ನಿಜವಾದ ಕಥೆ ಮೊದಲಾರ್ಧದ ನಂತರ ಆರಂಭವಾಗುತ್ತದೆ. ಕ್ಲೈಮ್ಯಾಕ್ಸ್ ಕೂಡ ಅದ್ಭುತವಾಗಿದೆ ಎಂದು ಅಭಿಮಾನಿಗಳು ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಧ್ರುವ ಸರ್ಜಾ ನಟನೆಯನ್ನೂ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

ಅಭಿಮಾನಿಗಳು ಹೇಳುವಂತೆ ಧ್ರುವ ಸರ್ಜಾ ಅವರು ಮತ್ತೆ ಆ್ಯಕ್ಷನ್ಗೆ ಮರಳಿದ್ದಾರೆ, ಕೆಡಿ ಸಿನಿಮಾ ಯಶಸ್ಸು ಕಾಣುವ ಸಾಧ್ಯತೆಗಳಿವೆ.

ಕೆಡಿ ಸಿನಿಮಾವು ಬಹು ತಾರೆಯರು ನಟಿಸಿರುವ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾದ ಪ್ರಮುಖ ಪಾತ್ರದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಕಿಚ್ಚ ಸುದೀಪ್, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.