ಕಿಲಾಡಿ ಮಾಡುವ ಹುಡುಗಿಯ ಬದುಕಿನ ಕಥೆಯನ್ನು ಹೊಂದಿರುವ ‘ಕಿಲಾಡಿ ಮೇಘ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಬಿ.ಟಿ. ಮಂಜುನಾಥ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ.

‘ಮನುಷ್ಯ ಹಣದ ಹಿಂದೆ ಹೋದಾಗ ಏನೆಲ್ಲ ಆಗುತ್ತದೆ ಎಂಬುದನ್ನು ಹಾರರ್ ಶೈಲಿಯಲ್ಲಿ ಹೇಳಿದ್ದೇನೆ. ‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ಈ ಚಿತ್ರದ ನಾಯಕಿ. ಆಕೆ ಮೇಘಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಶಂಕರ್ ಅಶ್ವಥ್ ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ. ಹದಿಮೂರು ವರ್ಷದ ಹುಡುಗಿಯ ಸುತ್ತ ನಡೆಯುವ ಕಥೆಯಿದು. ಮೊದಲು ಈ ಚಿತ್ರವನ್ನು ರಾಜೇಶ್ ರಾಜ ಅವರು ಆರಂಭಿಸಿದ್ದರು. ಕಾರಣಾಂತರಗಳಿಂದ ಅವರಿಗೆ ಚಿತ್ರವನ್ನು ಪೂರ್ತಿ ಮಾಡಲು ಸಾಧ್ಯವಾಗಲಿಲ್ಲ. ನಂತರ ನಾನು ಚಿತ್ರವನ್ನು ಕೈಗೆತ್ತಿಕೊಂಡು ಬಿಡುಗಡೆ ಹಂತಕ್ಕೆ ತಂದಿದ್ದೇನೆ’ ಎಂದರು ನಿರ್ದೇಶಕ.

ಸುಲೋಚನಾ ಪ್ರೊಡಕ್ಷನ್ಸ್ ಮೂಲಕ ಸುಲೋಚನಾ ಸುಕುಮಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ನಾನು ನಿಜವಾಗಿಯೂ ಅನುಭವಿಸಿ ಮಾಡಿದಂಥ ಪಾತ್ರವಿದು. ಯಾವುದೋ ಒಂದು ಜೀವ ತುಡಿತಕ್ಕೆ ಒಳಗಾಗಿರುತ್ತದೆ. ಅದನ್ನು ರಕ್ಷಣೆ ಮಾಡಲು ನಾನು ಬರುತ್ತೇನೆ’ ಎಂದರು ಶಂಕರ್ ಅಶ್ವಥ್.

ಚಿತ್ರಕ್ಕೆ ಕೆ.ಎಂ.ಇಂದ್ರ ಸಂಗೀತವಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1292798494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.