ಬೆಂಗಳೂರು: 'ಇತ್ತೀಚೆಗೆ ನಿಧನರಾದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವಿಶೇಷ ಗೌರವ ಸಲ್ಲಿಸಿದೆ.ತನ್ನ ಜನಪ್ರಿಯ ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರವನ್ನು ಕೆಎಂಎಫ್ ಮುದ್ರಿಸಿದೆ'ಎಂಬ ಫೋಟೊಗಳು ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಆದರೆ, ಪುನೀತ್ ಅವರ ಭಾವಚಿತ್ರವನ್ನು ಹಾಲಿನ ಪ್ಯಾಕೆಟ್‌ಗಳ ಮೇಲೆ ಮುದ್ರಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿಲ್ಲ ಎಂದು ಕೆಎಂಎಫ್ ಅಧಿಕಾರಿಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ ಭಾವಚಿತ್ರವಿರುವ ನಂದಿನಿ ಹಾಲಿನ ಪ್ಯಾಕೆಟ್‌ಗಳ ಬಗ್ಗೆ ನಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ರೈತರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಕೆಎಂಎಫ್‌ನ ನಂದಿನಿ ಉತ್ಪನ್ನಗಳಿಗೆಪುನೀತ್ ಅವರು ಸುಮಾರು 10 ವರ್ಷಗಳಿಂದ ಪ್ರಚಾರ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರು ಕೆಎಂಎಫ್‌ನಿಂದ ಯಾವುದೇ ಸಂಭಾವನೆಯನ್ನು ಪಡೆಯುತ್ತಿರಲಿಲ್ಲ.

ರಾಜಕೀಯಕ್ಕೆ ಅಪ್ಪು ಕರೆತರಲು ಪ್ರಯತ್ನ: ಮೋದಿ ಆಹ್ವಾನ ತಿರಸ್ಕರಿಸಿದ್ದ ಪುನೀತ್!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್ ಅವರ ಚಿತ್ರ ಇರುವ ಫೋಟೊಹಂಚಿಕೊಂಡು ಅಭಿಮಾನಿಗಳು ಕೆಎಂಎಫ್‌ಗೆ ಧನ್ಯವಾದ ಸಲ್ಲಿಸಿದ್ದಾರೆ.

ಪುನೀತ್ ಅವರು ನಿಧನರಾಗಿ 2 ತಿಂಗಳು ಕಳೆದಿವೆ. ಅವರ ಅಭಿಮಾನಿಗಳು ಪುನೀತ್ ಸ್ಮರಣೆಗಾಗಿ ಇನ್ನೂ ಕೂಡ ಅಲ್ಲಲ್ಲಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಮಾಡಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ನಟ ದಿವಂಗತ ಪುನೀತ್ ರಾಜ್‌ಕುಮಾರ್ ನೆನೆದು ಭಾವುಕರಾದ ಖ್ಯಾತ ನಿರ್ದೇಶಕ ರಾಜಮೌಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.