ಕೋಮಲ್, ಮೇಘನಾ ರಾಜ್, ಅನುಷಾ ರೈ ಮುಖ್ಯಭೂಮಿಕೆಯಲ್ಲಿರುವ ‘ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ಸಂದೇಶ್ ಶೆಟ್ಟಿ ಆಜ್ರಿ ಆ್ಯಕ್ಷನ್-ಕಟ್ ಹೇಳುತ್ತಿರುವ ಚಿತ್ರಕ್ಕೆ ವಿಕಾಸ್ ಶೆಟ್ಟಿ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ.

‘ಎರಡು ಹಂತಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಕುಂದಾಪುರ, ಶಿವಮೊಗ್ಗ, ತೀರ್ಥಹಳ್ಳಿ ಸೇರಿದಂತೆ ಕರಾವಳಿ ಮಲೆನಾಡು ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಈ ಸಿನಿಮಾದಲ್ಲಿ ಎರಡು ಶೀರ್ಷಿಕೆಗಳಿವೆ. ಅದಕ್ಕೆ ಕಾರಣ ಈ ಚಿತ್ರದ ಕಥಾಹಂದರ.ಚಿತ್ರದ ಮೊದಲಾರ್ಧ ಬಾರ್ನಲ್ಲಿ ಶುರುವಾಗಿ, ಬಾರ್ ಸುತ್ತ ಸಾಗಿದರೆ, ದ್ವಿತೀಯಾರ್ಧ ದೇವರ ತಾಣದಲ್ಲಿ ಶುರುವಾಗಿ ಅಲ್ಲೇ ಮುಗಿಯುತ್ತದೆ. ಹಾಗಾಗಿ ಚಿತ್ರದ ಮೊದಲಾರ್ಧ ‘ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್’ ಆಗಿದ್ದರೆ, ದ್ವಿತೀಯಾರ್ಧ ‘ದೇವರ ತಾಣ’ ಅಂತಿದೆ. ಆದರೆ ಸೆನ್ಸಾರ್ ನಿಯಮದಂತೆ, ಸಿನಿಮಾಕ್ಕೆ ಒಂದೇ ಹೆಸರು ಇಟ್ಟಿದ್ದೇವೆ’ ಎನ್ನುತ್ತಾರೆ ನಿರ್ದೇಶಕ.

ನಾಯಕ ನಟ ಕೋಮಲ್ ಒಂದು ಕಥೆಯಲ್ಲಿ ಆಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಸಿನಿಮಾ ನಿರ್ದೇಶಕನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡು, ವಜ್ರಧೀರ್ ಜೈನ್, ಉತ್ಸವ್, ಕಾರ್ತಿಕ್ ರಾವ್, ರಾಘು ರಾಮನಕೊಪ್ಪ ಮುಂತಾದವರು ಚಿತ್ರದಲ್ಲಿದ್ದಾರೆ.

ಚಿತ್ರಕ್ಕೆ ಪ್ರಾಂಶು ಜಾ ಸಂಗೀತ, ಸಜೀಶ್ ರಾಜ್ ಛಾಯಾಚಿತ್ರಗ್ರಹಣ, ಶಿವರಾಜ್ ಮೇಹು ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.