ನಟ ಕೋಮಲ್ ಅಭಿನಯದ ಹೊಸದೊಂದು ನಗೆಗುಳಿಗೆ ಸಿದ್ಧವಾಗುತ್ತಿದೆ. ಈ ಬಾರಿ ಕೋಮಲ್ ‘ಉಂಡೆನಾಮ’ ಹಿಡಿದುಕೊಂಡು ಬಂದಿದ್ದಾರೆ. ಚಿತ್ರದ ಶೀರ್ಷಿಕೆ ಇತ್ತೀಚೆಗೆ ಘೋಷಣೆಯಾಗಿದೆ. ಚಂದನವನದ ಪ್ರಮುಖ ನಟ ನಟಿಯರು ಚಿತ್ರದ ಶೀರ್ಷಿಕೆಯನ್ನು ಹೇಳಿ ಬಿಡುಗಡೆ ಮಾಡಿಯೇಬಿಟ್ಟರು. ಮಾತ್ರವಲ್ಲ. ಚಿತ್ರವೂ ಕೂಡಾ ಏಪ್ರಿಲ್ 14ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೋಮಲ್ ಅವರ ಜತೆ ಹರೀಶ್ ರಾಜ್, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವಾ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಕ್ ಜನಾರ್ದನ್ ನಟಿಸಿದ್ದಾರೆ.
ಈ ಚಿತ್ರವನ್ನು ಎನ್.ಕೆ. ಸ್ಟುಡಿಯೋಸ್ ಲಾಂಛನದ ಅಡಿಯಲ್ಲಿ ಸಿ.ನಂದಕಿಶೋರ್ ಅವರು ನಿರ್ಮಿಸಿದ್ದಾರೆ.
ಕೆ.ಎಲ್.ರಾಜಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಶ್ರೀಧರ್ ಸಂಭ್ರಮ ಅವರ ಸಂಗೀತ, ನವೀನ್ ಕುಮಾರ್ ಛಾಯಾಗ್ರಾಹಣ, ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.