ನಟ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಅವರು ತಮ್ಮದೇ ಪಿಎ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣ ಮಾಡಿರುವ, ಪೃಥ್ವಿ ಅಂಬಾರ್ ನಟನೆಯ ‘ಕೊತ್ತಲವಾಡಿ’ ಸಿನಿಮಾ ಆಗಸ್ಟ್ 1ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ಬಿಡುಗಡೆಯಾಯಿತು.

ಟೀಸರ್, ಹಾಡುಗಳ ಮೂಲಕ ಗಮನಸೆಳೆದಿರುವ ‘ಕೊತ್ತಲವಾಡಿ’ ಟೈಟಲ್ ಟ್ರ್ಯಾಕ್ಗೆ ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದು, ಗೀತೆಗೆ ವ್ಯಾಸರಾಜ್ ಸೋಸಲೆ ದನಿಯಾಗಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ ನೀಡಿರುವ ಈ ಹಾಡಿನಲ್ಲಿ ನಾಯಕನ ಶೌರ್ಯವನ್ನು ವರ್ಣಿಸಲಾಗಿದೆ.

ಶ್ರೀರಾಜ್ ನಿರ್ದೇಶನ ಚೊಚ್ಚಲ ಚಿತ್ರ ಇದಾಗಿದ್ದು, ಪೃಥ್ವಿಗೆ ಜೋಡಿಯಾಗಿ ಕಿರುತೆರೆ ನಟಿ ಕಾವ್ಯಾ ಶೈವ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ತಾರಾಬಳಗದಲ್ಲಿದ್ದಾರೆ. ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ಯಲ್ಲಿ ಕಂಪ್ಲೀಟ್ ಮಾಸ್ ಪಾತ್ರದಲ್ಲಿದ್ದಾರೆ. ಕಾರ್ತಿಕ್ ಎಸ್. ಛಾಯಾಚಿತ್ರಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಚಿತ್ರದ ಹಾಡುಗಳಿಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.