ಶುಕ್ರವಾರ, ನವೆಂಬರ್ 27, 2020
23 °C

‘ಶುಗರ್ ಫ್ಯಾಕ್ಟರಿ’ಯಲ್ಲಿ ಕೃಷ್ಣ– ಸೋನಲ್‌ ಡ್ಯುಯೆಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಲವ್ ಮಾಕ್ಟೇಲ್’ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರ ಸೆಟ್ಟೇರಿದೆ. ಈ ಚಿತ್ರದ ಶೀರ್ಷಿಕೆ ‘ಶುಗರ್ ಫ್ಯಾಕ್ಟರಿ’. ಈ ಫ್ಯಾಕ್ಟರಿಗೆ ನಾಯಕಿಯಾಗಿ ಎಂಟ್ರಿಕೊಟ್ಟಿದ್ದಾರೆ ಕರಾವಳಿಯ ‌ಚೆಂದುಳ್ಳಿ ಚೆಲುವೆ ಸೋನಲ್‌ ಮೊಂತೆರೊ.

ರೊಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಹಿಂದೆ ‘ಮನಸಾಲಜಿ’ ಚಿತ್ರ ನಿರ್ದೇಶಿಸಿದ್ದ ದೀಪಕ್ ಅರಸ್‌ಗೆ ಇದು ಎರಡನೇ ಸಿನಿಮಾ. ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನೂ ಇವರೇ ಹೆಣೆದಿದ್ದಾರೆ. ಸಂಭಾಷಣೆ ‘ಬಹದ್ದೂರ್’ ಖ್ಯಾತಿಯ ಚೇತನ್ ಕುಮಾರ್ ಅವರದು.

ಡಾರ್ಲಿಂಗ್ ಕೃಷ್ಣ ಈ ಚಿತ್ರದಲ್ಲಿ ಮೂವರು ನಾಯಕಿಯರೊಂದಿಗೆ ಡ್ಯುಯೆಟ್‌ ಹಾಡಲಿದ್ದಾರೆ. ಸೋನಲ್ ಮೊದಲ ನಾಯಕಿಯಾಗಿದ್ದರೆ, ಇನ್ನಿಬ್ಬರು ನಾಯಕಿಯರು ಮತ್ತು ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

ಜನವರಿಯಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಗೋವಾ, ಮೈಸೂರು ಹಾಗೂ ವಿದೇಶಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರ ತಂಡ ಯೋಜನೆ ಹಾಕಿಕೊಂಡಿದೆ.

ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್. ಬಂಡವಾಳ ಹೂಡಿದ್ದಾರೆ. ಛಾಯಾಗ್ರಹಣ ಸಂತೋಷ್ ರೈ ಪಾತಾಜೆ, ಕಬೀರ್ ರಫಿ ಅವರ ಸಂಗೀತ ನಿರ್ದೇಶನವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.