ಬೆಂಗಳೂರು: ಕೃಷ್ಣ ಅಜಯ್ ರಾವ್ ಅವರ ಹೊಸ ಚಿತ್ರ ‘ಕೃಷ್ಣ ಟಾಕೀಸ್’ನ ಟ್ರೈಲರ್ ಬಿಡುಗಡೆಯಾಗಿದೆ. ಗೋಕುಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಗೋವಿಂದ್ರಾಜು ಆಲೂರ್ ಅವರು ಈ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ವಿಜಯಾನಂದ್ ಅವರ ನಿರ್ದೇಶನವಿದೆ.

ಅಂದಹಾಗೆ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ ಚಿತ್ರವಿದು. ಕೃಷ್ಣ ಅವರಿಗೆ ಇದು 26ನೆಯ ಚಿತ್ರ. ಅವರು ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಿಂಧು ಲೋಕನಾಥ್ ಮುಗ್ಧ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪೂರ್ವ ಅವರು ನಗರದ ಹುಡುಗಿಯ ಪಾತ್ರ ಮಾಡಿದ್ದಾರೆ. ಚಿಕ್ಕಣ್ಣ ಕೂಡಾ ತಾರಾಗಣದಲ್ಲಿದ್ದಾರೆ.

ಶ್ರೀಧರ್ ವಿ.ಸಂಭ್ರಮ್ ಅವರ ಸಂಗೀತ ಸಂಯೋಜನೆ, ಅಭಿಷೇಕ್ ಜಿ.ಕಾಸರಗೋಡು ಅವರ ಛಾಯಾಗ್ರಹಣ, ವಿಕ್ರಂ ಅವರ ಸಾಹಸ ನಿರ್ದೇಶನ, ಶ್ರೀಕಾಂತ್ ಅವರ ಸಂಕಲನ ಚಿತ್ರಕ್ಕಿದೆ. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.