ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Cinema News | ‘ಕೃಷ್ಣಂ ಪ್ರಣಯ ಸಖಿ’ ಶೂಟಿಂಗ್ ಮುಕ್ತಾಯ

Published : 6 ಡಿಸೆಂಬರ್ 2023, 23:57 IST
Last Updated : 6 ಡಿಸೆಂಬರ್ 2023, 23:57 IST
ಫಾಲೋ ಮಾಡಿ
Comments

ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಜೋಡಿಯಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಡಬ್ಬಿಂಗ್‌ ಪ್ರಾರಂಭವಾಗಿದೆ. 

ಶ್ರೀನಿವಾಸರಾಜು ನಿರ್ದೇಶನದ ಚಿತ್ರವನ್ನು ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಿಸಲಾಗಿದೆ.  ಡಬ್ಬಿಂಗ್ ಕೂಡ ಮುಕ್ತಾಯ ಹಂತ ತಲುಪಿದ್ದು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದಾಗಿ ಚಿತ್ರತಂಡ ಹೇಳಿದೆ.

ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ  ಚಿತ್ರಕ್ಕಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್‌ಟೈನ್‌ಮೆಂಟ್‌ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT