ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೊದಲ ಹಾಡು ಬಿಡುಗಡೆ

Published 28 ಮೇ 2024, 1:27 IST
Last Updated 28 ಮೇ 2024, 1:27 IST
ಅಕ್ಷರ ಗಾತ್ರ

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ 41ನೇ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’ಯ ಮೊದಲ ಹಾಡು ಬಿಡುಗಡೆಯಾಗಿದೆ. 

‘ಮೈ ಮ್ಯಾರೇಜ್‌ ಈಸ್‌ ಫಿಕ್ಸ್‌ಡ್‌’ ಎನ್ನುತ್ತಾ ರ್‍ಯಾಪ್‌ ಶೈಲಿಯ ಹಾಡಿನೊಂದಿಗೆ ಬಂದಿದ್ದಾರೆ ಗಣೇಶ್‌. ನಿರ್ದೇಶಕ ಶ್ರೀನಿವಾಸರಾಜು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಚಿತ್ರದಲ್ಲಿವೆ. ಈ ಪೈಕಿ ನಿಶಾನ್ ರಾಯ್ ಸಾಹಿತ್ಯ ಬರೆದು ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಇದೀಗ ಬಿಡುಗಡೆಯಾಗಿದೆ. ಈ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಚಾಲನೆ ನೀಡಿದೆ. 

ಕಳೆದ ಮಾರ್ಚ್‌ನಲ್ಲಿ ಚಿತ್ರತಂಡ ಸಿನಿಮಾದ ಶೂಟಿಂಗ್‌ ಪೂರ್ಣಗೊಳಿಸಿತ್ತು. ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್‌ಟೈನ್ಮೆಂಟ್‌ನಡಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಿಸಿದ್ದಾರೆ. ಗಣೇಶ್‌ಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜಾ, ಗಿರಿ ಶಿವಣ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT