ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಬ್ಬಿಂಗ್‌ನಲ್ಲಿ ‘ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ..

Last Updated 19 ಫೆಬ್ರುವರಿ 2021, 10:53 IST
ಅಕ್ಷರ ಗಾತ್ರ

ತಾರಾಜೋಡಿ ದಿಗಂತ್ ಹಾಗೂ ಐಂದ್ರಿತಾ ರೇ ನಾಯಕ - ನಾಯಕಿಯಾಗಿ ನಟಿಸಿರುವ ‘ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಡಬ್ಬಿಂಗ್‌ ಪ್ರಜ್ವಲ್ ಪೈ ಅವರ‌ ಸ್ಟುಡಿಯೋದಲ್ಲಿ ನಡೆಯುತ್ತಿದೆ.

ಸಾಗರ, ಸಿಗಂಧೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಉಪ್ಪಿ ಎಂಟರ್ ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಪತ್ರಕರ್ತ ವಿನಾಯಕ ಕೋಡ್ಸರ ಈ ಚಿತ್ರ ನಿರ್ದೇಶಿಸಿದ್ದಾರೆ.‌ ಕೆಲವು ಕಿರು ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ವಿನಾಯಕ ಕೋಡ್ಸರ ಅವರಿಗೆ ಹಿರಿತೆರೆಯಲ್ಲಿ ಇದು ಚೊಚ್ಚಲ ನಿರ್ದೇಶನದ ಚಿತ್ರ.

ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ ಈ‌ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ನಂದ ಕಿಶೋರ್ ಎನ್ ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿದೆ. ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ.

ಸಂಪೂರ್ಣ ಹಾಸ್ಯಮಯ ಕಥಾಹಂದರದ ಈ ಚಿತ್ರದ ತಾರಾಬಳಗದಲ್ಲಿ ದಿಗಂತ್ ಐಂದ್ರಿತಾ ರೇ, ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಘವನ್, ಕಾಸರಾಗೋಡು ಚಿನ್ನ, ಪಿ.ಡಿ.ಸತೀಶ್‌ ಹಾಗೂ ನೀನಾಸಂನ ಹಲವು ಕಲಾವಿದರು ‌ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT