ಬುಧವಾರ, ಆಗಸ್ಟ್ 17, 2022
26 °C

ಕೆಟಿಎಂ ಪೋಸ್ಟರ್‌ ಬಿಡುಗಡೆ: ಭಿನ್ನ ಲುಕ್‌ನಲ್ಲಿ ದೀಕ್ಷಿತ್ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

2020ರ ಯಶಸ್ವಿ ಚಿತ್ರ ಎನ್ನಿಸಿಕೊಂಡ ‘ದಿಯಾ’ ಖ್ಯಾತಿಯ ದೀಕ್ಷಿತ್‌ ಶೆಟ್ಟಿ ನಟನೆಯ ಮುಂದಿನ ಚಿತ್ರ ‘ಕೆಟಿಎಂ’. ಈ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ನಟ ರಕ್ಷಿತ್‌ ಶೆಟ್ಟಿ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಕೈಯಲ್ಲಿ ಸಿಗರೇಟ್ ಹಿಡಿದು, ಚಿಂತೆಯಲ್ಲಿ ತಲೆ ಮೇಲೆ ಕೈ ಇರಿಸಿಕೊಂಡಂತಿರುವ ಪೋಸ್ಟರ್‌ನಲ್ಲಿ ದೀಕ್ಷಿತ್‌ ಭಿನ್ನ ನೋಟ ಗಮನ ಸೆಳೆಯುವಂತಿದೆ. ಪೋಸ್ಟರ್ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿರುವುದು ಸುಳ್ಳಲ್ಲ.

ಮಹಾಸಿಂಹ ಮೂವೀಸ್ ಬ್ಯಾನರ್‌ ಅಡಿಯಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ಅರುಣ್ ನಿರ್ದೇಶನವಿದೆ. ವಿನಯ್‌ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

ಚಿತ್ರದಲ್ಲಿ ದೀಕ್ಷಿತ್‌ 4 ಭಿನ್ನ ಛಾಯೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಇಬ್ಬರು ನಾಯಕಿಯರಿದ್ದು ಕಾಜಲ್‌ ಕುಂದರ್ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನೊಬ್ಬ ನಾಯಕಿ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು