ಕೆ.ರಾಮನಾರಾಯಣ್ ನಿರ್ದೇಶನದಲ್ಲಿ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರ್ ಮನು ನಾಯಕರಾಗಿ ನಟಿಸುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು.

ಯೋಗರಾಜ್ ಸಿನಿಮಾಸ್ ಈ ಚಿತ್ರವನ್ನು ಅರ್ಪಿಸುತ್ತಿದ್ದು, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ‘ರಾಮಾಚಾರಿ’ ಧಾರಾವಾಹಿ ಖ್ಯಾತಿಯ ಮೌನ ಗುಡ್ಡೆಮನೆ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ರಾಮನಗರದಲ್ಲಿ ನಡೆಯುತ್ತಿದೆ.

ನಿರ್ದೇಶಕದ ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕೆ.ರಾಮನಾರಾಯಣ್ ಅವರ ಮತ್ತೊಂದು ಹೆಜ್ಜೆ ಇದಾಗಿದೆ. ಯೋಗರಾಜ್ ಭಟ್ ಹಾಗೂ ಜಯಂತ ಕಾಯ್ಕಿಣಿ ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ. ದಿಗಂತ್, ಸೋನಾಲ್ ಮೊಂತೆರೊ, ಶರತ್ ಲೋಹಿತಾಶ್ವ, ತಬಲ ನಾಣಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.