ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟರ ಕೂಟಕ್ಕೆ ಖೇಣಿ: ಈಶ್ವರಪ್ಪ ಟೀಕೆ

Last Updated 6 ಮಾರ್ಚ್ 2018, 11:15 IST
ಅಕ್ಷರ ಗಾತ್ರ

ಬೀದರ್: ‘ಕಾಂಗ್ರೆಸ್‌ ಭ್ರಷ್ಟರ ಕೂಟಗೆ ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ ಖೇಣಿ ಸೇರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟರಕೂಟವನ್ನು ದೊಡ್ಡದು ಮಾಡಿದ್ದಾರೆ. ಬಿಜೆಪಿ ಈ ವಿಷಯವನ್ನು ಚುನಾವಣೆಯಲ್ಲಿ ಅಸ್ತ್ರವಾಗಿ ಬಳಸಿಕೊಳ್ಳಲಿದೆ’ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು. 

‘ಖೇಣಿ ಕಾಂಗ್ರೆಸ್‌ಗೆ ಸೇರಿಕೊಂಡಿರುವುದು ಭ್ರಷ್ಟಾಚಾರವನ್ನು ಬಿಗಿದು ಅಪ್ಪಿಕೊಂಡಂತೆ’ ಎಂದು ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಜರಿದರು.

‘ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಶಾಸಕ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೇವೆ ಹೊರತು ನೈಸ್‌ ಕಂಪನಿಯನ್ನಲ್ಲ ಎಂದು ಹೇಳಿಕೆ ನೀಡಿರುವುದ ಹಾಸ್ಯಾಸ್ಪದವಾಗಿದೆ’ ಎಂದು ಟೀಕಿಸಿದರು.

‘ನೈಸ್‌ ಹಗರಣದ ವಿರುದ್ಧ ರಾಜ್ಯದಲ್ಲಿ ಅನೇಕ ಹೋರಾಟಗಳು ನಡೆದಿವೆ. ಜಯಚಂದ್ರನ್‌ ಅಧ್ಯಕ್ಷತೆಯ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿಯನ್ನೂ ಕೊಟ್ಟಿದೆ. ಇದೆಲ್ಲ ಗೊತ್ತಿದ್ದೂ  ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು  ಖೇಣಿ ಅವರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡಿರುವುದು  ಭ್ರಷ್ಟಾಚಾರಕ್ಕೆ ಬೆಂಬಲಕೊಟ್ಟಿರುವ  ಜೀವಂತ ಸಾಕ್ಷಿಯಾಗಿದೆ’ ಎಂದು ಆರೋಪಿಸಿದರು

‘ಮುಖ್ಯಮಂತ್ರಿ ಅವರು ಭ್ರಷ್ಟಾಚಾರದ ಬಗೆಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಭ್ರಷ್ಟರಿಗೆ ರಕ್ಷಣೆ ಒದಗಿಸುತ್ತಿರುವುದಕ್ಕೆ ಬೇರೆ ಉದಾಹರಣೆ ಬೇಕಿಲ್ಲ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT