ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೆಟ್ಟೇರಲು ಸಜ್ಜಾದ ‘ಕುರಿ ಕಾಯೋನು’

Published 23 ಆಗಸ್ಟ್ 2024, 23:53 IST
Last Updated 23 ಆಗಸ್ಟ್ 2024, 23:53 IST
ಅಕ್ಷರ ಗಾತ್ರ

ಎರಡು ದಶಕಗಳಿಂದ ಚಿತ್ರರಂಗದಲ್ಲಿ ಕಲಾವಿದ, ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಓಂ ಮಹೇಶ್ ಇದೀಗ ‘ಕುರಿ ಕಾಯೋನು’ ಚಿತ್ರದೊಂದಿಗೆ ನಿರ್ಗೇಶಕನಾಗುತ್ತಿದ್ದಾರೆ. ಜೊತೆಗೆ ಈ ಚಿತ್ರದ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚೆಗಷ್ಟೇ ನಡೆಯಿತು. ಶಾಸಕ ಭೈರತಿ ಬಸವರಾಜ್‌ ತಮ್ಮ ಗೆಳೆಯನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ತಂಡಕ್ಕೆ ಶುಭ ಹಾರೈಸಿದರು. ರಾಜೇಶ್, ಪ್ರಿಯಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಓಂ’ ಸಿನಿಮಾದಿಂದ ಪ್ರಾರಂಭಿಸಿ ಶಿವಣ್ಣ, ಸುದೀಪ್, ಪುನೀತ್, ವಿಜಯ್ ಇವರೆಲ್ಲರ ಜೊತೆ ಕೆಲಸ ಮಾಡಿದ್ದೇನೆ. ಚಿತ್ರದಲ್ಲಿ ನಾಯಕ ಮುಗ್ಧ, ಆತನಿಗೆ ತನ್ನ ಕುರಿಗಳನ್ನು ಬಿಟ್ಟರೆ ಹೊರಗಿನ ಪ್ರಪಂಚವೇ ಗೊತ್ತಿರುವುದಿಲ್ಲ. ಕುರಿಯನ್ನು ಜೀವದಂತೆ ಪ್ರೀತಿಸುತ್ತಾನೆ ಎಂಬಿತ್ಯಾದಿ ಅಂಶಗಳನ್ನು ಹೊಂದಿರುವ ಕಥೆ. ಕೋಲಾರ, ಅಂತರಗಂಗೆ, ಮಲೆ ಮಾದೇಶ್ವರ ಬೆಟ್ಟ ಇತರೆಡೆ ಚಿತ್ರೀಕರಿಸುವ ಯೋಜನೆಯಿದೆ’ ಎಂದರು ಮಹೇಶ್‌.

ಕುರಿ ಕಾಯೋನು ಚಿತ್ರದಲ್ಲಿ 4 ಹಾಡುಗಳಿದ್ದು ರಾಘವೇಂದ್ರ ಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಉಳಿದ ತಂತ್ರಜ್ಞರು ಮತ್ತು ಪಾತ್ರವರ್ಗ ಇನ್ನಷ್ಟೇ ಆಯ್ಕೆಯಾಗಬೇಕಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT