ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ಮಗಳ ಮದುವೆಗೆ ಆಹ್ವಾನ ನೀಡಿದ್ದಾರೆ.

ಖುಷ್ಬೂ ಜೊತೆಯಲ್ಲಿ ಅವರ ಪತಿ ಸುಂದರ್, ಪುತ್ರಿ ಅವಂತಿಕಾ ಹಾಗೂ ಭಾವಿ ಅಳಿಯ ಶ್ರವಣ್ ಶ್ರೀನಿವಾಸನ್ ಅವರು ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಮೋದಿ ಅವರನ್ನು ಭೇಟಿಯಾದ ಚಿತ್ರಗಳನ್ನು ಖುಷ್ಬೂ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಕುಟುಂಬ ಇಂದು ಪ್ರಧಾನಿ ಕಚೇರಿಗೆ ಭೇಟಿ ನೀಡಿ ಅವರನ್ನು ನಮ್ಮ ಮಗಳ ಮದುವೆಗೆ ಆಹ್ವಾನ ಮಾಡಲಾಯಿತು. ಅವರ ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ನಮ್ಮನ್ನು ಪ್ರೀತಿಯಿಂದ ಬರಮಾಡಿಕೊಂಡು ನವ ಜೋಡಿಗಳಿಗೆ ಆಶೀರ್ವಾದ ಮಾಡಿದ್ದಾರೆ. ಅವರ ಆ ಗುಣಕ್ಕೆ ನಾನು ಕೃತಜ್ಞತೆ ತಿಳಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಖುಷ್ಬೂ ಸುಂದರ್ ಅವರು ರವಿಚಂದ್ರನ್ ಜೊತೆಗೆ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿ ಪ್ರಸಿದ್ಧಿ ಪಡೆದಿದ್ದರು. ಸದ್ಯ, ಅವರು ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ಪೋಷಕ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಖುಷ್ಬೂ ಪುತ್ರಿ ಅವಂತಿಕಾ ಅವರು ತಮಿಳು ಚಿತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.