ಶುಕ್ರವಾರ, ಫೆಬ್ರವರಿ 28, 2020
19 °C
ಕುತೂಹಲ ಕೆರಳಿಸಿದ ಟ್ರೇಲರ್‌

ಟಾಲಿವುಡ್‌ನ ಬಹುನಿರೀಕ್ಷಿತ ‘ಲಕ್ಷ್ಮೀಸ್ ಎನ್‌ಟಿಆರ್’ ಮಾರ್ಚ್ 29ಕ್ಕೆ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಟಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಲಕ್ಷ್ಮೀಸ್ ಎನ್‌ಟಿಆರ್’ ಸಿನಿಮಾಕ್ಕೆ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಈ ಚಿತ್ರಕ್ಕೆ ಈಚೆಗಷ್ಟೇ ಸೆನ್ಸಾರ್ ಮಂಡಳಿ ‘ಯು’ಪ್ರಮಾಣಪತ್ರ ನೀಡಿದೆ.

ಸಿನಿಮಾದ ಬಿಡುಗಡೆಯ ದಿನಾಂಕ ಚುನಾವಣೆ ಅಧಿಸೂಚನೆಗೂ ಮುನ್ನವೇ ಘೋಷಣೆಯಾಗಿತ್ತು ಎಂದು ನಿರ್ಮಾಪಕ ರಾಕೇಶ್ ರೆಡ್ಡಿ ಚುನಾವಣಾ ಆಯೋಗಕ್ಕೆ ಮತ್ತು ಸೆನ್ಸಾರ್ ಮಂಡಳಿಗೆ ಮನವರಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ. ಸಿನಿಮಾ ಮಾರ್ಚ್ 29ಕ್ಕೆ ತೆರೆ ಕಾಣಲಿದೆ.

ಆಂಧ್ರಪ್ರದೇಶದ ರಾಜಕಾರಣದಲ್ಲಿ ದಂತಕತೆಯಂತಿದ್ದ ನಟ ಎನ್.ಟಿ. ರಾಮ್‌ರಾವ್ ಅವರ ಜೀವನಾಧಾರಿತ ಚಿತ್ರ ಇದಾಗಿದೆ. ಆದರೆ, ಇಡೀ ಸಿನಿಮಾ ಎನ್‌ಟಿಆರ್ ಅವರ ಎರಡನೇ ಪತ್ನಿ ಶಿವಪಾರ್ವತಿ ಅವರು ಕಂಡಂತೆ ಚಿತ್ರೀಕರಿಸಲಾಗಿದೆ ಎನ್ನುವ ಗಾಳಿಸುದ್ದಿಗಳೂ ಇವೆ. ಈಗಾಗಲೇ ಚಿತ್ರದ ಟ್ರೈಲರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರೇಕ್ಷಕರ ಕುತೂಹಲ ಕೆರಳಿಸಿದೆ.

ಲಕ್ಷ್ಮೀಪಾರ್ವತಿ ಪಾತ್ರದಲ್ಲಿ ಕನ್ನಡತಿ ಯಜ್ಞಾಶೆಟ್ಟಿ ಅಭಿನಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು