ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆ: ರಾಜ್ಯದಲ್ಲೂ 2 ದಿನ ಶೋಕಾಚರಣೆ

Last Updated 6 ಫೆಬ್ರುವರಿ 2022, 11:27 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2 ದಿನಗಳ ಕಾಲ ಶೋಕಾಚರಣೆಗೆ ನಿರ್ಧರಿಸಲಾಗಿದೆ.

ಈ ಕುರಿತು ಭಾನುವಾರ ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಕಚೇರಿಯು, ‘ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2 ದಿನ ಶೋಕಾಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ’ ಎಂದು ತಿಳಿಸಿದೆ.

‘ಇಂದು ಮತ್ತು ನಾಳೆ ರಾಜ್ಯದಲ್ಲಿ ಶೋಕಾಚರಣೆ ಇರಲಿದೆ. ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲು ರಾಜ್ಯ ಸರ್ಕಾರ ಸೂಚಿಸಿದೆ’ ಎಂದು ಸಿಎಂ ಕಚೇರಿ ಹೇಳಿದೆ.

ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ಕರ್‌ ಇಂದು ಬೆಳಿಗ್ಗೆ ನಿಧನರಾದರು. ಸಂಜೆ 6:30ಕ್ಕೆ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT