ಶುಕ್ರವಾರ, ಆಗಸ್ಟ್ 19, 2022
21 °C

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ: ವೈದ್ಯರು ಹೇಳಿದ್ದೇನು?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸುದ್ದಿಸಂಸ್ಥೆ ಎಎನ್​ಐ ಜತೆ ಮಾತನಾಡಿದ ಡಾ.ಪ್ರತೀತ್ ಸಮ್ದಾನಿ ಅವರು, ‘ಲತಾ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾಗಿದೆ. ಎರಡು ದಿನಗಳ ಹಿಂದೆ ಅವರ ವೆಂಟಿಲೇಟರ್ ಸಂಪರ್ಕ ತೆಗೆಯಲಾಗಿದೆ. ಆದರೆ, ಲತಾ ಅವರಿಗೆ ಇನ್ನು ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಎರಡು ವಾರಗಳ ಹಿಂದೆ ಲತಾ ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಕೂಡಲೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು.

ಲತಾ ಮಂಗೇಶ್ಕರ್‌ ಅವರ ಆರೋಗ್ಯ ಕುರಿತಾದ ವದಂತಿಗಳಿಗೆ ಕಿವಿಗೊಡದಂತೆ ಅವರ ವಕ್ತಾರರು ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಆರೋಗ್ಯ ಕುರಿತು ಗಾಳಿ ಸುದ್ದಿಗಳು ಹರಡಿದ್ದವು. ಈ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್‌ ವಕ್ತಾರರು ಮನವಿ ಮಾಡಿದ್ದರು.

ಓದಿ... ಯುವ ನಟಿಯೊಂದಿಗೆ ಹೃತಿಕ್​ ರೋಷನ್​ ಡೇಟಿಂಗ್? ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ ವೈರಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು