ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬರೀಷ್‌ ಇಲ್ಲದ ಈ ಮೂರು ವರ್ಷ... ಅಭಿಮಾನಿಗಳಿಂದ ಅಂಬಿ ನಮನ

Last Updated 24 ನವೆಂಬರ್ 2021, 5:56 IST
ಅಕ್ಷರ ಗಾತ್ರ

ಬೆಂಗಳೂರು: ನಟ ಅಂಬರೀಷ್‌ ನಿಧನರಾಗಿ (2018 ನವೆಂಬರ್‌ 24) ಇಂದಿಗೆ ಮೂರು ವರ್ಷಗಳು ಕಳೆದಿವೆ. ಅಭಿಮಾನಿಗಳು, ಆಪ್ತರು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್‌ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.

ಮಂಡ್ಯದಲ್ಲೂ ಅಂಬರೀಷ್‌ ಭಾವಚಿತ್ರಕ್ಕೆ ಅಭಿಮಾನಿಗಳು ಪೂಜೆ ಸಲ್ಲಿಸಿದರು.

ರೆಬೆಲ್ ಸ್ಟಾರ್, ಮಂಡ್ಯದ ಗಂಡು ಎಂದು ಕರೆಸಿಕೊಂಡಿದ್ದ ಅಂಬರೀಷ್‌ ರಾಜಕಾರಣದಲ್ಲೂ ಸಕ್ರಿಯರಾಗಿದ್ದರು. ಮೇ 2013ರಿಂದ ಜೂನ್‌ 2016ರವರೆಗೆ ವಸತಿ ಸಚಿವರಾಗಿದ್ದರು. ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೂ ಪಾತ್ರರಾಗಿದ್ದರು.

ಅಂಬರೀಷ್‌ ಅವರಿಗೂ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕು ಎಂಬ ಒತ್ತಾಯ ಅವರ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿತ್ತು. ಸುಮಲತಾ ಅಂಬರೀಷ್‌ ಅವರು ಇಂಥ ಹೋರಾಟಗಳಿಂದ ದೂರ ಇರುವಂತೆ ಅಭಿಮಾನಿಗಳಿಗೆ ದೀರ್ಘ ಪತ್ರ ಬರೆದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT