ಶುಕ್ರವಾರ, ಸೆಪ್ಟೆಂಬರ್ 24, 2021
26 °C

ತುರ್ತು ನಿಗಾ ಘಟಕದಲ್ಲಿ ಬಾಲಿವುಡ್‌ ನಟಿ, ದಿಲೀಪ್‌ ಕುಮಾರ್‌ ಪತ್ನಿ ಸಾಯಿರಾ ಬಾನು

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ತೀವ್ರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ಬಾಲಿವುಡ್‌ ನಟಿ ಸಾಯಿರಾ ಬಾನು(76) ಅವರನ್ನು ತುರ್ತು ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಾಯಿರಾ ಬಾನು ಅವರು ಮೂರು ದಿನಗಳ ಹಿಂದೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ರಕ್ತದೊತ್ತಡ ಕಾಣಿಸಿಕೊಂಡ ಪರಿಣಾಮ ಅವರನ್ನು ತುರ್ತು ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಸಾಯಿರಾ ಬಾನು ಇತ್ತೀಚೆಗೆ ತಮ್ಮ ಪತಿ, ಬಾಲಿವುಡ್‌ನ ಖ್ಯಾತ ನಟ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದಾರೆ. ದಿಲೀಪ್ ಕುಮಾರ್ ಜತೆ ಸುಮಾರು 55 ವರ್ಷಗಳ ದಾಂಪತ್ಯವನ್ನು ಸಾಯಿರಾ ನಡೆಸಿದ್ದರು.

ಸಾಯಿರಾ 1960ರಲ್ಲಿ 16 ವರ್ಷದವರಿದ್ದಾಗಲೇ ಹಿಂದಿ ಚಲನಚಿತ್ರಗಳಲ್ಲಿ ನಟಿಸಲು ತೊಡಗಿದರು. ನಸೀಮ್ ಬಾನು ಪುತ್ರಿಯಾಗಿದ್ದ ಸಾಯಿರಾ, ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು