ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗರೇಟ್‌ ಸೇದುತ್ತಿರುವ ’ಕಾಳಿ’ ಮಾತೆ: ನಿರ್ದೇಶಕಿ ಲೀನಾ ವಿರುದ್ಧ ಭಾರೀ ಆಕ್ರೋಶ

ಅಕ್ಷರ ಗಾತ್ರ

ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧಟ್ವಿಟರ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ತಮಿಳುನಾಡಿನಲೀನಾ ಮಣಿಮೇಕಲೈ ಅವರು ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದಾರೆ. ಶನಿವಾರ ಅವರು ಈಸಾಕ್ಷ್ಯಚಿತ್ರದ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಇದರಲ್ಲಿ ಹಿಂದೂ ದೇವತೆ ಕಾಳಿ ಮಾತೆ ಸಿಗರೇಟ್ ಸೇದುತ್ತಿರುವುದು ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂ(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ.

ಈ ಪೋಸ್ಟರ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಲೀನಾ ಮಣಿಮೇಕಲೈಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದ್ದು ಅವರನ್ನು ಬಂಧಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಟ್ವಿಟರ್‌ನಲ್ಲಿ ಅರೆಸ್ಟ್‌ ಲೀನಾ ಮಣಿಮೇಕಲೈ(#ArrestLeenaManimekalai) ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ. ಸಾವಿರಾರು ಬಳಕೆದಾರರು ಲೀನಾ ಅವರನ್ನು ಬಂಧಿಸಬೇಕು ಎಂದು ಪ್ರಧಾನ ಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಪೋಸ್ಟರ್ ನೋಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು,ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆಯಾಗುತ್ತಿದೆ, ನಮ್ಮ ಧರ್ಮದ ನಿಂದನೆಯಾಗುತ್ತಿದ್ದುಇಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ತಾವು ಹಾಕುವ ಪೋಸ್ಟ್‌ಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂಪಿಎಂಒಗೆ ಟ್ಯಾಗ್ ಮಾಡುತ್ತಿದ್ದಾರೆ.

ಲೀನಾ ಮಣಿಮೇಕಲೈ ಹಲವಾರುಸಾಕ್ಷ್ಯಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಅವರು2003ರಲ್ಲಿ 'ಮಹಾತ್ಮ' ಎಂಬಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ್ದರು. ತಮ್ಮಸಾಕ್ಷ್ಯಚಿತ್ರಗಳ ಮೂಲಕ ಮಹಿಳೆಯರ ಮೇಲಿನ ದೌರ್ಜನ್ಯದಂತಹ ಸಮಸ್ಯೆಗಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಲೀನಾ ಪ್ರತಿಕ್ರಿಯೆ...

ವಿವಾದಿತ ಪೋಸ್ಟರ್‌ ಬಗ್ಗೆ ಟ್ವೀಟ್‌ ಮಾಡಿರುವ ಲೀನಾ, ನಾವು ಯಾವುದಕ್ಕೂ ಹೆದರುವುದಿಲ್ಲ, ನಾನು ನಂಬುವ ವಿಚಾರವನ್ನು ಗಟ್ಟಿಯಾಗಿ ಮಾತನಾಡುತ್ತೇನೆ ಹಾಗೂ ಅದಕ್ಕೆ ಬದ್ದವಾಗಿ ಇರುತ್ತೇನೆ. ಅದಕ್ಕೆ ನಾನು ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT