ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖ್ಯಾತ ಗಾಯಕಿ 'ಗಾನ ಕೋಗಿಲೆ' ಲತಾ ಮಂಗೇಶ್ಕರ್‌ ಇನ್ನಿಲ್ಲ

Last Updated 6 ಫೆಬ್ರುವರಿ 2022, 7:22 IST
ಅಕ್ಷರ ಗಾತ್ರ

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರು ಇಂದು ನಿಧನರಾದರು. ಕೋವಿಡ್‌–19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಅವರು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಕೆಲವು ವಾರಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.

ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅವರು ಅಗಲಿದ್ದಾರೆ.

ಗಾನ ಕೋಗಿಲೆ ಲತಾ ದೀದಿ

ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಅವರು ಸುಮಾರು ಏಳು ದಶಕಗಳ ಕಾಲ ಹಿನ್ನೆಲೆ ಗಾಯಕಿಯಾಗಿ ಮನರಂಜಿಸಿದ್ದಾರೆ. 1942ರಿಂದ ಆರಂಭವಾದ ಅವರ ಗಾಯನ ಯಾನದಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಏ ಮೇರೆ ವತನ್‌ ಕೆ ಲೋಗೊ, ಲಗ್‌ ಜಾ ಗಲೇ, ಏಹ್‌ ಕಹಾ ಆಗಯೇ ಹಮ್‌ ಹಾಗೂ ಪ್ಯಾರ್‌ ಕಿಯಾ ತೊ ಡರ್ನಾ ಕ್ಯಾ,...ಸೇರಿದಂತೆ ಅವರ ನೂರಾರು ಹಾಡುಗಳು ಇವತ್ತಿಗೂ ಅಪಾರ ಜನಪ್ರಿಯತೆಯನ್ನು ಪಡೆದಿವೆ.

ಲತಾ ಮಂಗೇಶ್ಕರ್‌ ಅವರಿಗೆ ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ, ದಾದಾ ಸಾಹೇಬ್‌ ಫಾಲ್ಕೆ ಸೇರಿದಂತೆ ಹತ್ತು ಹಲವು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

ಪಂಡಿತ್‌ ದೀನಾನಾಥ್‌ ಮಂಗೇಶ್ಕರ್‌ ಅವರ ಹಿರಿಯ ಮಗಳಾಗಿ 1929ರ ಅಕ್ಟೋಬರ್‌ 28ರಂದು ಲತಾ ಜನಿಸಿದರು. ಅವರ ತಂದೆ ಮರಾಠಿ ಮೂಲದ ಗಾಯಕರು. ಸೋದರಿ ಆಶಾ ಭೋಸ್ಲೆ ಸೇರಿದಂತೆ ಅವರಿಗೆ ನಾಲ್ವರು ಒಡಹುಟ್ಟಿದವರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT