ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ್‌ ದೇವರಕೊಂಡ, ಅನನ್ಯಾ ಪಾಂಡೆ ಹರಟೆ: ನೆಟ್ಟಿಗರು ಹಿಗೆಂದರು!

Last Updated 20 ಮಾರ್ಚ್ 2022, 7:06 IST
ಅಕ್ಷರ ಗಾತ್ರ

ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ಹಾಗೂ ಬಾಲಿವುಡ್‌ ನಟಿ ಅನನ್ಯಾ ಪಾಂಡೆ ಪಾರ್ಟಿಯೊಂದರಲ್ಲಿ ಹರಟೆ ಹೊಡೆದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾದಲ್ಲಿ ವಿಜಯ್‌ ಮತ್ತು ಅನನ್ಯಾ ನಟಿಸಿದ್ದಾರೆ, ಈಗಾಗಲೇ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚೆಗೆ ಮುಂಬೈನಲ್ಲಿ ಅಪೂರ್ವ ಮೆಹ್ತಾ ಅವರ ಜನ್ಮದಿನ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು. ಈ ಪಾರ್ಟಿಗೆ ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ ಸೇರಿದಂತೆ ಹಲವಾರು ತಾರೆಯರು ಭಾಗವಹಿಸಿದ್ದರು. ಈ ವೇಳೆ ವಿಜಯ್‌ ಹಾಗೂ ಅನನ್ಯಾ ಬಹಳ ಹೊತ್ತು ಹರಟೆ ಹೊಡೆದಿದ್ದಾರೆ.

ವಿಜಯ್‌, ಅನನ್ಯಾ ಹರಟಿರುವ ವಿಡಿಯೊ ಲೀಕ್‌ ಆಗಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೊ ನೋಡಿ ಅಭಿಮಾನಿಗಳು ತಮ್ಮ ಅಭಿಪ್ರಾಯಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ.

ವಿಜಯ್‌, ಅನನ್ಯಾ ಕ್ಯೂಟ್‌ ಜೋಡಿ ಎಂದು ಕೆಲವರು ಕಾಮೆಂಟ್‌ ಮಾಡಿದ್ದಾರೆ. ಇಷ್ಟು ಹೊತ್ತು ಹರಟುವುದು ಏನಿತ್ತು? ಎಂದು ಮತ್ತೆ ಕೆಲವರು ಹೇಳಿದ್ದಾರೆ. ಒಟ್ಟಿನಲ್ಲಿ ಈವಿಡಿಯೊ ನೋಡಿ ನೆಟ್ಟಿಗರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಪೋಕಿರಖ್ಯಾತಿಯ ಪುರಿ ಜಗನ್ನಾಥ್ ’ಲೈಗರ್‌’ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT