ಮಂಗಳವಾರ, ಜನವರಿ 18, 2022
27 °C

ಲೈಗರ್‌ ಚಿತ್ರ ಟೀಸರ್‌: ಮಾಸ್‌ ಅವತಾರದಲ್ಲಿ ವಿಜಯ್‌ ದೇವರಕೊಂಡ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿ 24 ಗಂಟೆಗಳಲ್ಲಿ 1.6 ಕೋಟಿ ವೀಕ್ಷಣೆ ಪಡೆಯುವ ಮೂಲಕ ದಾಖಲೆ ನಿರ್ಮಾಣ ಮಾಡಿದೆ. ಇನ್ನು ಟೀಸರ್‌ ಅನ್ನು ಸಿನಿ ಪ್ರೇಮಿಗಳು ಹಾಗೂ ವಿಜಯ್‌ ದೇವರಕೊಂಡ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಬಾಕ್ಸಿಂಗ್ ಪಟುವಾಗಿ ಕಾಣಿಸಿಕೊಂಡಿರುವ ವಿಜಯ್ ದೇವರಕೊಂಡ ಲುಕ್​ಗೆ ಪ್ರೇಕ್ಷರು ಮಾರುಹೋಗಿದ್ದಾರೆ.

ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಹಾಗೂ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಜೊತೆ ವಿಜಯ್‌ ನಟಿಸಿದ್ದಾರೆ. 

ಟೀಸರ್‌ನಲ್ಲಿ ವಿಜಯ್‌ ದೇವರಕೊಂಡ ಟೀ ಮಾರಾಟ ಮಾಡಿ, ಕಷ್ಟಪಟ್ಟು ಬಾಕ್ಸಿಂಗ್‌ ತರಬೇತಿ ಪಡೆದು  ಭಾರತವನ್ನು ಪ್ರತಿನಿಧಿಸುವ ದೃಶ್ಯವಿದೆ. ಈ ಚಿತ್ರ ಆಗಸ್ಟ್ 25ರಂದು ತೆರೆಗೆ ಅಪ್ಪಳಿಸಲಿದೆ ಎಂದು ಚಿತ್ರದ ನಿರ್ಮಾಪಕ ಕರಣ್ ಜೋಹರ್ ಘೋಷಿಸಿದ್ದಾರೆ.

ಓದಿ: 

'ಪೋಕಿರಿ' ಖ್ಯಾತಿಯ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು