ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Liger Trailer: ಲೈಗರ್ ಟ್ರೈಲರ್ ಬಿಡುಗಡೆ– ವಿಜಯ್ ದೇವರಕೊಂಡ, ಮೈಕ್ ಟೈಸನ್ ಮಿಂಚು

ಅಕ್ಷರ ಗಾತ್ರ

ಮುಂಬೈ:ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾಟ್ರೈಲರ್‌ ಇಂದು ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸಿದೆ.

ತೆಲುಗು, ಕನ್ನಡ, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಟ್ರೈಲರ್ ಬಿಡುಗಡೆಯಾಗಿದೆ.ಜುಲೈ 20 ಹಾಗೂ 21ರಂದು ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಟ್ರೈಲರ್ ಲಾಂಚ್ ಕಾರ್ಯಕ್ರಮಗಳು ನಡೆದಿವೆ.

‘ಲೈಗರ್’ ಚಿತ್ರದಲ್ಲಿ ಬಾಕ್ಸಿಂಗ್ ಪಟುವಾಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಹಾಗೂ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಜೊತೆ ವಿಜಯ್‌ ನಟಿಸಿದ್ದಾರೆ. ಅದರಲ್ಲೂ ಮೈಕ್ ಟೈಸನ್ ಪಾತ್ರ ಸಿನಿ ಪ್ರಿಯರಿಗೆ ಭಾರಿ ಕುತೂಹಲ ಮೂಡಿಸಿದೆ.

‘ಪೋಕಿರಿ’ ಖ್ಯಾತಿಯ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.

ಈ ಚಿತ್ರ ಆಗಸ್ಟ್ 25ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆಚಿತ್ರತಂಡ ಮಾಹಿತಿ ನೀಡಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT