ಹೈದರಾಬಾದ್: ನಟ ವಿಜಯ್ ದೇವರಕೊಂಡ ಅಭಿನಯದ ಬಹುನಿರೀಕ್ಷಿತ 'ಲೈಗರ್' ಸಿನಿಮಾದ ‘ಗ್ಲಿಂಪ್ಸ್’ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.
ಯುಟ್ಯೂಬ್‌ನಲ್ಲಿ ಗ್ಲಿಂಪ್ಸ್ (ವಿಡಿಯೊ ತುಣಕು) ಬಿಡುಗಡೆಯಾದ 4 ದಿನಗಳಲ್ಲಿ 19.58 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಆಗಸ್ಟ್ 25ರಂದು ‘ಲೈಗರ್’ ಸಿನಿಮಾ ತೆರೆಗೆ ಬರಲಿದೆ. ಚಿತ್ರದಲ್ಲಿ ಬಾಕ್ಟಿಂಗ್ ಪಟುವಾಗಿ ಕಾಣಿಸಿಕೊಂಡಿರುವ ವಿಜಯ್ ಅವರ ಲುಕ್‌ಗೆ ಅಭಿಮಾನಿಗಳು ಪಿಧಾ ಆಗಿದ್ದಾರೆ.
ಚಿತ್ರದಲ್ಲಿ ಮೈಕ್ ಟೈಸನ್ ನಟಿಸುತ್ತಿರುವ ವಿಚಾರ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಬಾಕ್ಸಿಂಗ್ ಜಗತ್ತಿನಲ್ಲಿ ಅಮೆರಿಕದ ಮೈಕ್ ಟೈಸನ್ ಅವರದ್ದು ದೊಡ್ಡ ಹೆಸರು. ಟೈಸನ್, ಇದೇ ಮೊದಲ ಬಾರಿಗೆ ಅವರು ಭಾರತೀಯ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.
ಈ ಸಿನಿಮಾವನ್ನು ನಿರ್ದೇಶಕ ಪುರಿ ಜಗನ್ನಾಥ್, ಕರಣ್ ಜೋಹರ್, ಚಾರ್ಮಿ ಕೌರ್, ಅಪೂರ್ವ ಮೆಹ್ತಾ ಸೇರಿಕೊಂಡು ನಿರ್ಮಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.