ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಜನಿಕಾಂತ್ ಅವರ 171ನೇ ಚಿತ್ರ ನಿರ್ದೇಶಿಸಲಿರುವ ಲೋಕೇಶ್ ಕನಕರಾಜ್

Published 11 ಸೆಪ್ಟೆಂಬರ್ 2023, 7:26 IST
Last Updated 11 ಸೆಪ್ಟೆಂಬರ್ 2023, 7:29 IST
ಅಕ್ಷರ ಗಾತ್ರ

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅವರ 171ನೇ ಚಿತ್ರವನ್ನು ‘ವಿಕ್ರಮ್’ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶನ ಮಾಡಲಿದ್ದಾರೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಹೇಳಿದೆ.

ಕನಕರಾಜ್ ಅವರು ರಜನಿಕಾಂತ್ ಅವರ ಚಿತ್ರ ನಿರ್ದೇಶಿಸುತ್ತಾರೆ ಎಂಬ ಹಲವು ತಿಂಗಳುಗಳಿಂದ ಎದ್ದಿದ್ದ ಊಹಾಪೋಹಕ್ಕೆ ಸನ್ ಪಿಕ್ಚರ್ಸ್ ತೆರೆ ಎಳೆದಿದೆ.

ಸದ್ಯಕ್ಕೆ ಹೆಸರಿಡದ ಈ ಚಿತ್ರವನ್ನು ಕನಕರಾಜ್ ಚಿತ್ರಕಥೆ ಬರೆದು ನಿರ್ದೇಶಿಸಲಿದ್ದಾರೆ. ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಅನಿರುದ್ಧ ರವಿಚಂದ್ರನ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ.

‘ಸೂಪರ್‌ಸ್ಟಾರ್ ರಜನಿಕಾಂತ್ ಅವರ 171ನೇ ಚಿತ್ರವನ್ನು ಲೋಕೇಶ್ ಕನಕರಾಜ್ ಚಿತ್ರಕಥೆ ಬರೆದು ನಿರ್ದೇಶಿಸಲಿದ್ದಾರೆ. ಅನಿರುದ್ಧ ರವಿಚಂದ್ರನ್ ಸಂಗೀತ ನಿರ್ದೇಶನ ಮತ್ತು ಅಂಬರಿವ್ ಸಾಹಸ ನಿರ್ದೇಶನ ಇರಲಿದೆ’ ಎಂದು ಸನ್ ಪಿಕ್ಚರ್ಸ್ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ತಿಳಿಸಿದೆ.

‘ಕೈದಿ’, ‘ವಿಕ್ರಮ್’ ಮತ್ತು ಮುಂಬರುವ ‘ಲಿಯೋ’ಗೆ ಆ್ಯಕ್ಷನ್ ಕಟ್ ಹೇಳುತ್ತಿರುವ ಲೋಕೇಶ್ ಕನಕರಾಜ್ ಅವರು, ರಜನಿಕಾಂತ್ ಅವರೊಂದಿಗೆ ಕೆಲಸ ಮಾಡುವ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT