‘ಲೂಸ್ ಮಾದ’ ಖ್ಯಾತಿಯ ನಟ ಯೋಗೇಶ್ ಅವರ ಅಭಿನಯದ ‘ಲಂಕೆ’ ಚಿತ್ರವು ಇಂದು ರಾಜ್ಯದಾದ್ಯಂತ ಅಂದಾಜು 200 ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ರಾಮ್ ಪ್ರಸಾದ್ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ. ದಿಗ್ರೇಟ್ ಎಂಟರ್ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್(ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ಲಾಕ್ಡೌನ್ ಬಳಿಕ ಬಿಗ್ಬಜೆಟ್ ಚಿತ್ರಗಳು ಬಿಡುಗಡೆಯಾಗಿಲ್ಲ. ಈ ಅವಧಿಯಲ್ಲಿ ಇಷ್ಟೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಚಿತ್ರ ‘ಲಂಕೆ’. ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಪ್ರೇಕ್ಷಕರಿಗಷ್ಟೇ ಅವಕಾಶ ಇದ್ದರೂ ನಾವು ಚಿತ್ರಬಿಡುಗಡೆಗೆ ಧೈರ್ಯ ಮಾಡಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ರಾಮ್ ಪ್ರಸಾದ್.

ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಅವರೂ ನಟಿಸಿದ್ದಾರೆ.ಕಾವ್ಯ ಶೆಟ್ಟಿ, ಶರತ್ ಲೋಹಿತಾಶ್ವ, ಶೋಭ್ರಾಜ್, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ವಾಣಿಶ್ರೀ, ಗಾಯತ್ರಿ ಜಯರಾಂ, ಎಸ್ಟರ್ ನರೋನ, ಪ್ರಶಾಂತ್ ಸಿದ್ದಿ, ಆದ್ಯ ನಾಯಕ್, ಮಿಥುನ್ ಗೌಡ, ಬೇಬಿ ಜನ್ಯ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.