ಸೋಮವಾರ, ಅಕ್ಟೋಬರ್ 3, 2022
24 °C

‘ಲವ್‌ 360’ ಟ್ರೇಲರ್‌ ಬಿಡುಗಡೆ ಮಾಡಿದ ಶಿವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಟ್ರೇಲರ್‌ನ್ನು ನಟ ಶಿವರಾಜಕುಮಾರ್ ಅವರು ಬಿಡುಗಡೆ ಮಾಡಿದರು. ಚಿತ್ರ ಆಗಸ್ಟ್ 19ರಂದು ರಾಜ್ಯದಾದ್ಯಂತ ತೆರೆ ಕಾಣುತ್ತಿದೆ. ಪ್ರವೀಣ್ ಈ ಚಿತ್ರದ ನಾಯಕ, ರಚನಾ ಇಂದರ್‌ ನಾಯಕಿ.

ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮ್ಮಿಬ್ಬರ ಕಾಂಬಿನೇಶನ್‌ನಲ್ಲಿ ಚಿತ್ರ ಬರುತ್ತದೆ. ‘ಲವ್ 360’ ಚಿತ್ರದ ಟ್ರೇಲರ್ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ ‘ಜಗವೇ ನೀನು ಗೆಳತಿಯೆ’ ಹಾಡಂತೂ ನನಗೆ ಬಹಳ ಇಷ್ಟ. ನಾಯಕ, ನಾಯಕಿ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ’ ಎಂದರು ನಟ ಶಿವರಾಜಕುಮಾರ್.

‘ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಯವರು ನಮ್ಮ ಚಿತ್ರವನ್ನು ವಿತರಿಸುತ್ತಿದ್ದಾರೆ. ನೂರೈವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು ನಿರ್ದೇಶಕ ಶಶಾಂಕ್.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು