ನಟ ವಸಿಷ್ಠ ಸಿಂಹ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾ ‘love..ಲಿ’ಯ ಚಿತ್ರೀಕರಣ ಆರಂಭವಾಗಿದ್ದು, ಇದೀಗ ಚಿತ್ರದ ಫಸ್ಟ್ಲುಕ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ರಕ್ತಸಿಕ್ತ ಕೈಯಲ್ಲಿ ಲಾಂಗ್ ಹಿಡಿದು ಸಿಗರೇಟ್ ಎಳೆಯುತ್ತಾ ಬರುವ ವಸಿಷ್ಠ ಸಿಂಹ ರಾ ಲುಕ್ನಲ್ಲಿ ಇಲ್ಲಿ ಕಾಣಿಸಿಕೊಂಡಿದ್ದಾರೆ. ವಸಿಷ್ಠ ಅವರ ಈ ಶೇಡ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಚಿತ್ರದ ಆ್ಯಕ್ಷನ್ ಸೀಕ್ವೆನ್ಸ್ನ ಚಿತ್ರೀಕರಣ ನಡೆಯುತ್ತಿದೆ. ನೈಜ ಘಟನೆಗಳನ್ನು ಆಧರಿಸಿದ ‘love..ಲಿ’ ಸಿನಿಮಾವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದು, ರವೀಂದ್ರ ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹರೀಶ್ಕೊಂಬೆ ಕ್ಯಾಮೆರಾ, ಅನೂಪ್ ಸಿಳೀನ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ನಾಯಕ ನಟನಾಗಿಯೂ, ಖಳನಾಯಕನಾಗಿಯೂ ಬೆಳ್ಳಿಪರದೆಯ ಮೇಲೆ ಮಿಂಚಿದ್ದ ವಸಿಷ್ಠ ಸಿಂಹ ಸದ್ಯಕ್ಕೆ ತಾವು ನಾಯಕನಾಗಿ ನಟಿಸಿರುವ ‘ಕಾಲಚಕ್ರ’ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಜೊತೆಗೆ ‘ತಲ್ವಾರ್ಪೇಟೆ’ ಸಿನಿಮಾದಲ್ಲಿ ಹೀರೊ ಆಗಿ ನಟಿಸುತ್ತಿದ್ದಾರೆ. ‘ಡಾಲಿ’ ಧನಂಜಯ್ ನಟನೆಯ ‘ಹೆಡ್ಬುಷ್’ ಸೇರಿದಂತೆ ತೆಲುಗಿನ ಕಲೆ ಚಿತ್ರಗಳಲ್ಲೂ ವಸಿಷ್ಠ ಬಣ್ಣಹಚ್ಚಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.