ಬಹುತೇಕ ಹೊಸಬರಿಂದಲೇ ಕೂಡಿರುವ ‘ಲವ್ ಸೀಸನ್ಸ್’ ಚಿತ್ರದ ‘ಮಳೆಯಾಗೋ ಮೊದಲೇ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕೃತ್ವಿಕ್ ನಿರ್ದೇಶನದ ಚಿತ್ರ ವಿಭಿನ್ನ ಪ್ರೇಮಕಥೆ ಹೊಂದಿದೆ.

‘ಮಳೆಯಾಗೋ ಮೊದಲೇ’ ಗೀತೆಗೆ ಪ್ರಮೋದ್ ಮರವಂತೆ ಸಾಹಿತ್ಯವಿದ್ದು, ಪ್ರಜ್ಞಾ ಮರಾಠೆ ಮತ್ತು ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ವೀರ್ ಸಮರ್ಥ್ ಸಂಗೀತವಿದೆ. ಮುಕುಂದ ರಾಮಸ್ವಾಮಿಗೆ ದಿಯಾ ಕೀರ್ತಿ ಜೋಡಿಯಾಗಿದ್ದಾರೆ. ರಾಜೇಶ್ ನಟರಂಗ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಇದೊಂದು ಪ್ರೇಮಕಥೆ ಹೊಂದಿರುವ ಚಿತ್ರ. ಯಾರು ಯಾರನ್ನೂ ನಂಬಲು ಕಷ್ಟವಾಗುವಂಥ ಕಾಲಮಾನವಿದು. ಇಂಥ ಹೊತ್ತಿನಲ್ಲಿ ನಂಬಿಕೆಯೆಂಬ ಚುಂಬಕಶಕ್ತಿಯ ಸುತ್ತ ಹೆಣೆದ ಕಥೆಯಿದು. ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಜೂನ್ ತಿಂಗಳಲ್ಲಿ ಚಿತ್ರ ಬಿಡುಗಡೆ ಆಲೋಚನೆಯಿದೆ’ ಎಂದಿದ್ದಾರೆ ನಿರ್ದೇಶಕ.

ಎನ್.ಆರ್ ಮಂಜುನಾಥ (ನೀಲೇರಿ) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅವಿನಾಶ ಶಾಸ್ತ್ರಿ ಛಾಯಾಚಿತ್ರಗ್ರಹಣ, ಮಧು ತುಂಬಕೆರೆ ಸಂಕಲನವಿದೆ. ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು, ಮಂಡ್ಯ ರಮೇಶ್, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್ ಮುಂತಾದವರ ತಾರಾಗಣವಿದೆ.v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1825842239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.