ಬಹುತೇಕ ಹೊಸಬರಿಂದಲೇ ಕೂಡಿರುವ ‘ಲವ್ ಸೀಸನ್ಸ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕೃತ್ವಿಕ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ.

‘ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. ಮೂಲತಃ ರಂಗಭೂಮಿಯಿಂದ ಬಂದವನು. ‘ಬುದ್ಧಿವಂತ–2’, ‘ಗುರುದೇವ ಹೊಯ್ಸಳ’ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಿದ್ದೆ. ಆ ಅನುಭವದಿಂದ ನಿರ್ದೇಶನ ಮಾಡಿರುವೆ. ಇದೊಂದು ಪ್ರೇಮಕಥೆ ಹೊಂದಿರುವ ಚಿತ್ರ. ಯಾರು ಯಾರನ್ನೂ ನಂಬಲು ಕಷ್ಟವಾಗುವಂಥ ಕಾಲಮಾನವಿದು. ಇಂಥ ಹೊತ್ತಿನಲ್ಲಿ ನಂಬಿಕೆಯೆಂಬ ಚುಂಬಕಶಕ್ತಿಯ ಸುತ್ತ ಹೆಣೆದ ಕಥೆಯಿದು’ ಎಂದರು ನಿರ್ದೇಶಕ.

ಮುಕುಂದ ರಾಮಸ್ವಾಮಿಗೆ ದಿಯಾ ಕೀರ್ತಿ ಜೋಡಿಯಾಗಿದ್ದಾರೆ. ರಾಜೇಶ್ ನಟರಂಗ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ನಾನು ಜವಾಬ್ದಾರಿಯುತ ತಂದೆಯ ಪಾತ್ರದಲ್ಲಿ ನಟಿಸಿರುವೆ. ಪ್ರೀತಿಯೆಂಬುದು ಯಾವ ಕಾಲಕ್ಕೂ ಹಳತಾಗದ ವಿಚಾರ. ಇದರ ಸುತ್ತಲೇ ಸುತ್ತುವ ಕಥೆ. ನಿರ್ದೇಶಕರ ಕೆಲಸ ಬಹಳ ಅಚ್ಚುಕಟ್ಟಾಗಿದೆ. ಈ ತಂಡಕ್ಕೆ ಎಲ್ಲರ ಪ್ರೋತ್ಸಾಹವಿರಲಿ’ ಎಂದರು ರಾಜೇಶ್ ನಟರಂಗ.

ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಎನ್.ಆರ್. ಮಂಜುನಾಥ (ನೀಲೇರಿ) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ತಿಂಗಳ ಹಿಂದಷ್ಟೇ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಜೂನ್ ತಿಂಗಳಲ್ಲಿ ಚಿತ್ರ ಬಿಡುಗಡೆ ಆಲೋಚನೆಯಿದೆ. ಅದಕ್ಕೂ ಮೊದಲು ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುತ್ತೇವೆ’ ಎಂದರು ನಿರ್ಮಾಪಕ.

ವೀರ್ ಸಮರ್ಥ್ ಸಂಗೀತ, ಅವಿನಾಶ ಶಾಸ್ತ್ರಿ ಛಾಯಾಚಿತ್ರಗ್ರಹಣ, ಮಧು ತುಂಬಕೆರೆ ಸಂಕಲನವಿದೆ. ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು, ಮಂಡ್ಯ ರಮೇಶ್, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-51-1063066511

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.