‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ನಿರ್ದೇಶಕ ಕುಮಾರ್ ಅವರ ಹೊಸ ಸಿನಿಮಾ ‘ಲವ್ ಯು ಮುದ್ದು’ ಸಿನಿಮಾ ನ.7ರಂದು ತೆರೆಕಾಣುತ್ತಿದ್ದು, ಇತ್ತೀಚೆಗೆ ಸಿನಿಮಾದ ಟ್ರೇಲರ್ ಬಿಡುಗಡೆಯಾಯಿತು. ನಟಿ ಸಂಜನಾ ಆನಂದ್ ಅತಿಥಿಯಾಗಿ ಭಾಗವಹಿಸಿದ್ದರು.

ಪ್ರೀತಿಯನ್ನು ಪಡೆದುಕೊಳ್ಳುವ ಶಕ್ತಿ ಇಲ್ಲದೇ ಇದ್ದರೆ ಪ್ರೀತಿ ಮಾಡಬಾರದು ಎಂಬ ಎಳೆಯನ್ನು ಇಟ್ಟುಕೊಂಡು ಬರುತ್ತಿರುವ ಈ ಸಿನಿಮಾದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ಹಾಗೂ ರೇಷ್ಮಾ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ.

ಟ್ರೇಲರ್ ಬಿಡುಗಡೆಗೊಳಿಸಿ ಮಾತನಾಡಿದ ಸಂಜನಾ ಆನಂದ್, ‘ಚಿತ್ರರಂಗಕ್ಕೆ ನನ್ನನ್ನು ಪರಿಚಯಿಸಿದ್ದು ಕುಮಾರ್. ಅವರ ಬರವಣಿಗೆ ತುಂಬಾ ಇಷ್ಟವಾಗುತ್ತದೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಎಷ್ಟು ಯಶಸ್ಸು ನೀಡಿತ್ತೋ ಅದರ ನೂರಷ್ಟು ಯಶಸ್ಸನ್ನು ಈ ಸಿನಿಮಾ ನೀಡಲಿ’ ಎಂದರು.

‘ಇದು ನನ್ನ ಐದನೇ ಸಿನಿಮಾ. ಮಹಾರಾಷ್ಟ್ರದಲ್ಲಿ ನಡೆದ ಘಟನೆ ಇಟ್ಟುಕೊಂಡು ಸಿನಿಮಾ ಕಥೆ ಹೆಣೆಯಲಾಗಿದೆ. ಮನಸ್ಸಿಗೆ ಮುಟ್ಟುವ ಕಥೆ ಇದರಲ್ಲಿದೆ’ ಎನ್ನುತ್ತಾರೆ ಕುಮಾರ್.

ಸಿನಿಮಾದಲ್ಲಿ ರಾಜೇಶ್ ನಟರಂಗ, ತಬಲಾ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಸ್ವಾತಿ ನಟಿಸಿದ್ದಾರೆ. ಕಿಶನ್ ಎಂಟರ್ಟೇನ್ಮೆಂಟ್ ಬ್ಯಾನರ್ನಡಿ ಕಿಶನ್ ಟಿ.ಎನ್. ಚಿತ್ರ ನಿರ್ಮಾಣ ಮಾಡಿದ್ದಾರೆ. ಕೃಷ್ಣ ದೀಪಕ್ ಛಾಯಾಚಿತ್ರಗ್ರಹಣ, ಅನಿರುದ್ಧ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿ.ಎಸ್.ದೀಪು ಸಂಕಲನ ಚಿತ್ರಕ್ಕಿದೆ. ಜಗದೀಶ್ ಫಿಲ್ಮಂ ಚಿತ್ರವನ್ನು ರಾಜ್ಯದಾದ್ಯಂತ ವಿತರಣೆ ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.