ಕಂಚಿನ ಕಂಠದ ಗಾಯಕ... ಪ್ರತಿಭಾನ್ವಿತ ನಾಯಕ ವಸಿಷ್ಠ ಸಿಂಹ ಅವರ ಬಹುನಿರೀಕ್ಷಿತ ಲವ್ಲಿ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಕೈಯಲ್ಲಿ ಲಾಂಗ್ ಹಿಡಿದು, ಮತ್ತೊಂದು ಕೈಯಲ್ಲಿ ಸಿಗರೇಟ್ ಎಳೆಯುತ್ತಾ, ರಾ ಲುಕ್ ನಲ್ಲಿ ವಸಿಷ್ಠ ಸಿಂಹ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದ ಪರಿಚಯದ ದೃಶ್ಯ ಅದ್ದೂರಿಯಾಗಿ ಮೂಡಿಬಂದಿತ್ತು. ಈಗ ಪೋಸ್ಟರ್ ಬಿಡುಗಡೆ ಆಗಿದೆ. ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

‘ಮಫ್ತಿ’ ಸಿನಿಮಾ ನಿರ್ದೇಶಕ ನರ್ತನ್ ಜೊತೆಗೆ ಕೆಲಸ ಮಾಡಿರುವ ಚೇತನ್ ಕೇಶವ್ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಲವ್ಲಿ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರವೀಂದ್ರ ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಹರೀಶ್ಕೊಂಬೆ ಕ್ಯಾಮೆರಾ, ಅನೂಪ್ ಸಿಳೀನ್ ಸಂಗೀತ ಸಂಯೋಜನೆಯಿದೆ.

ವಸಿಷ್ಠ ಸಿಂಹ ಅವರ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಜಯರಾಜ್ ಜೀವನ ಆಧರಿಸಿ ‘ಹೆಡ್ ಬುಷ್’, ‘ಸಿಂಬಾ’, ‘ಓದೆಲಾ ರೈಲ್ವೇ ಸ್ಟೇಷನ್’ ಸೇರಿ ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.