ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈರಲ್‌ ಫೋಟೊ: ಅನ್ಯೋನ್ಯತೆಯಲ್ಲಿ ಮಿಂದೆದ್ದ ಆಲಿಯಾ– ರಣಬೀರ್‌ ಜೋಡಿ

Last Updated 13 ಫೆಬ್ರುವರಿ 2022, 11:17 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್‌ನ ತಾರಾ ಜೋಡಿಗಳಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಚಿತ್ರದ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

‘ಮೈ_ರಣಬೀರ್‌ಕಪೂರ್‌’ ಹೆಸರಿನ ಖಾತೆಯಿಂದ ಹಂಚಿಕೊಳ್ಳಲಾದ ಫೋಟೊದಲ್ಲಿ ರಣಬೀರ್‌ ಮತ್ತು ಆಲಿಯಾ ಪರಸ್ಪರ ಅನ್ಯೋನ್ಯವಾಗಿ ಕಾಣಿಸಿಕೊಂಡಿದ್ದಾರೆ. ರಣಬೀರ್‌ ಕೈ ಹಿಡಿದಿರುವ ಆಲಿಯಾ ಆತ್ಮೀಯತೆಯ ಭಾವಕ್ಕೆ ಶರಣಾಗಿದ್ದಾರೆ.

‘ಬ್ರಹ್ಮಾಸ್ತ್ರ ಪಾರ್ಟ್ ಒನ್’ ಸೆಪ್ಟೆಂಬರ್ 9, 2022ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.

ಚಿತ್ರವನ್ನು ಅಯನ್ ಮುಖರ್ಜಿ ನಿರ್ದೇಶಿಸಿದ್ದು, ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಚಿತ್ರಗಳನ್ನು ಖ್ಯಾತ ನಿರ್ದೇಶಕ ರಾಜಮೌಳಿ ಪ್ರಸ್ತುತಪಡಿಸುತ್ತಿದ್ದಾರೆ.

ಚಿತ್ರದಲ್ಲಿ ಬಿಗ್‌ ಬಿ ಅಮಿತಾಭ್‌ಬಚ್ಚನ್, ತೆಲುಗಿನ ಸೂಪರ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ, ಮೌನಿ ರಾಯ್ ಸೇರಿದಂತೆ ಹಲವು ಖ್ಯಾತನಾಮರ ತಾರಾಗಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT