ಮಂಗಳವಾರ, ಜನವರಿ 18, 2022
22 °C

ತೆಲುಗಿನ ಚಿತ್ರ ಸಾಹಿತಿ ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೆಲುಗಿನ ಖ್ಯಾತ ಚಿತ್ರ ಸಾಹಿತಿ ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಲ್ಲಿನ ಕಿಮ್ಸ್‌ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೆಲವು ದಿನಗಳಿಂದ ಅವರು ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು ಎಂದು ಅವರ ಕುಟುಂಬದರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚಿಕಿತ್ಸೆಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಕಿಮ್ಸ್‌ ಆಸ್ಪತ್ರೆಯ ಹೆಲ್ತ್‌ ಬುಲೇಟಿನ್‌ ತಿಳಿಸಿದೆ.

ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ಅವರು ತೆಲುಗಿನಲ್ಲಿ 3 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಬರೆದಿದ್ದಾರೆ. ಅವರಿಗೆ 11 ಸಲ ನಂದಿ ಪ್ರಶಸ್ತಿ ದೊರೆತಿರುವುದು ವಿಶೇಷ, 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು